News Kannada
Tuesday, November 29 2022

ಬೆಂಗಳೂರು ನಗರ

ಬೆಂಗಳೂರು: ಕಾಡಾನೆ ಹಾವಳಿ ತಡೆಗಟ್ಟಲು 4 ಜಿಲ್ಲೆಗಳಲ್ಲಿ ಆನೆ ಟಾಸ್ಕ್‌ ಫೋರ್ಸ್‌ ರಚಿಸಲು ಆದೇಶ - 1 min read

Bengaluru: The state government has issued orders to set up elephant task forces in four districts to curb the menace of wild elephants.
Photo Credit : Freepik

ಬೆಂಗಳೂರು ನ.22: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾಡಾನೆ ಹಾವಳಿ ತಡೆಗಟ್ಟುವ ಯತ್ನವಾಗಿ ಆನೆ ಟಾಸ್ಕ್ ಫೋರ್ಸ್ ರಚಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೋಮವಾರ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅದ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕಾಡಾನೆ ಹಾವಳಿ ಅಧಿಕವಾಗಿರುವ ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಈ ನಾಲ್ಕೂ ಜಿಲ್ಲೆಗಳಲ್ಲಿ ಆಯಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಟಾಸ್ಕ್ ಫೋರ್ಸ್ ಗಳನ್ನು ತಕ್ಷಣ ದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು, ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಈ ಕೆಳಕಂಡಂತೆ ಕಾರ್ಯನಿರ್ವಹಿಸಬೇಕಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸುವುದು , ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್ ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸುವುದು ಮುಂತಾದ ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕೈಗೊಳ್ಳಬೇಕು.

ಕಾಡಾನೆ ಹಾವಳಿ ಕಂಡುಬರುವ ಸ್ಥಳಗಳಲ್ಲಿ ಆನೆಗಳ ಚಲನವಲನ ಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಅರಣ್ಯ ಪ್ರದೇಶದೊಳಗೆ ಸಂಚರಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು.

ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರ ಸ್ಥಾನದಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿ ದೂರವಾಣಿ ಸಂಖ್ಯೆ ಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸುವುದು.

ಆನೆಗಳನ್ನು ಹಿಮ್ಮೆಟ್ಟಿಸಲು ಅಗತ್ಯವಿರುವ ವಾಹನ ,ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ ಸಲಕರಣೆಗಳನ್ನು ರಾಜ್ಯ ಅರಣ್ಯ ಇಲಾಖೆಯ ಮುಖ್ಯಸ್ಥರು (ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ) ಒದಗಿಸುವುದು ಅರಣ್ಯ ಪಡೆ ಮುಖ್ಯಸ್ಥರು ಜಿಲ್ಲಾ ಟಾಸ್ಕ್ ಫೋರ್ಸ್ ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷ ಕರನ್ನು ಸ್ಥಳ ನಿಯುಕ್ತಿಗೊಳಿಸಿ ಕೂಡಲೇ ಆದೇಶ ಹೊರಡಿಸುವುದು.

ಆನೆ ಹಾವಳಿ ಪ್ರದೇಶಗಳಿಗೆ ಕೂಡಲೇ ತಲುಪಲು ಅನುಕೂಲವಾಗುವಂತೆ ಪ್ರತಿ ಜಿಲ್ಲಾ ಟಾಸ್ಕ್ ಪ್ಫೋರ್ಸ್ ಗೆ ಮೂರು ಬೊಲೆರೋ ಜೀಪ್ ಗಳನ್ನು ಒದಗಿಸುವುದು ಹಾಗೂ ಕ್ಯಾಂಟರ್ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನಿಯೋಜಿಸುವುದು. ಆನೆಗಳನ್ನು ಹಿಮ್ಮೆಟ್ಟಿಸುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯ ಸಹಾಯ ಪಡೆಯುವುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

See also  ಆಂಫೊಟೆರಿಸಿನ್-ಬಿ ಔಷಧದ ಹೆಚ್ಚುವರಿ 29,250 ಬಾಟಲುಗಳನ್ನು ಎಲ್ಲೆಡೆ ಹಂಚಿಕೆ ಮಾಡಲಾಗಿದೆ: ಸದಾನಂದ ಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು