ಬೆಂಗಳೂರು: 2019ರಲ್ಲಿ ಜೆಡಿಎಸ್ ತೊರೆದು ಪಕ್ಷ ಸೇರುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಸಹಾಯ ಮಾಡಿದ್ದ ಮಾಜಿ ಸಚಿವ ಎ.ಎಚ್.ವಿಶ್ವನಾಥ್ ಅವರು ಕಾಂಗ್ರೆಸ್ಗೆ ಮರಳುವ ಸಾಧ್ಯತೆ ಇದೆ.
ಜೆಡಿಎಸ್ ಸೇರುವ ಮೊದಲು ಅವರು ಕಾಂಗ್ರೆಸ್ ನಲ್ಲಿದ್ದರು. ಮೂಲಗಳ ಪ್ರಕಾರ, ವಿಶ್ವನಾಥ್ ಅವರು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಮತ್ತೆ ಸೇರಲು ಅನುಮತಿ ಕೋರಿದರು.
ಮೂಲಗಳ ಪ್ರಕಾರ ಖರ್ಗೆ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ ಅಂತಿಮ ನಿರ್ಧಾರವನ್ನು ಕೆಪಿಸಿಸಿಗೆ ಬಿಡುವುದಾಗಿ ಹೇಳಿದ್ದಾರೆ.
ಅವರ ಪುತ್ರ ಪೂರ್ವಾಜ್ ವಿಶ್ವನಾಥ್ ಈಗಾಗಲೇ ಕಾಂಗ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದಾರೆ.