News Kannada
Sunday, February 05 2023

ಬೆಂಗಳೂರು ನಗರ

ಬೆಂಗಳೂರು: ಗಡಿ ವಿವಾದ- ರಾಜ್ಯದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದ ಸಿಎಂ ಬೊಮ್ಮಾಯಿ

Hubballi: Congress is the gateway to enter politics with bad culture: CM Bommai
Photo Credit : G Mohan

ಬೆಂಗಳೂರು, ಡಿ.8: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. ಕರ್ನಾಟಕದಲ್ಲಿಯೂ ಕೂಡ ಸಂಪುರ್ಣ ಬಂದೋಬಸ್ತು ಮಾಡಲಾಗಿದೆ. ನಾನೂ ಕೂಡ ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ.

ಅಮಿತ್ ಶಾ, ಅವರಾಗಲಿ ಬೇರ್ಯಾರೂ ನನ್ನ ಬಳಿ ಈ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.

See also  ಜೂನ್ ತಿಂಗಳಾಂತ್ಯಕ್ಕೆ ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಪ್ರಕಟ: ಬಿ.ಸಿ. ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು