News Kannada
Monday, February 06 2023

ಬೆಂಗಳೂರು ನಗರ

ಬೆಂಗಳೂರು: ಗುಜರಾತ್ ಚುನಾವಣಾ ಫಲಿತಾಂಶ, ಸುಶಾಸನದ ಫಲ- ಸಿಎಂ ಬೊಮ್ಮಾಯಿ

International level infrastructure in Byadgi taluk: CM Bommai
Photo Credit : G Mohan

ಬೆಂಗಳೂರು, ಡಿ.8: ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಲಲಿತ್ ಅಶೋಕ್ ಹೋಟೆಲ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಭಾಜಪ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಕಳೆದ ಎಲ್ಲ ಚುನಾವಣೆ ಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆ ಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ. ಇದುವರೆಗೂ ದೇಶದಲ್ಲಿ ಆಡಳಿತ ವಿರೋಧ ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. 7 ನೇ ಬಾರಿ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ ಎಂದರು.

ಮೋದಿಯವರ ನಾಯಕತ್ವ
ಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಮಾಡುತ್ತಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ. ಅವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಳೆದ ಬಾರಿ 3 ರಾಜ್ಯಗಳಲ್ಲಿ ಸಹ ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಸಮಬಲದ ಹೋರಾಟವಿದೆ. ಅಂತಿಮವಾಗಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹೋಲಿಕೆ ಸಲ್ಲದು
ನವದೆಹಲಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ 15 ವರ್ಷ ಆಡಳಿತ ಮಾಡುವುದೇ ದೊಡ್ಡ ಸಾಧನೆ. ಸ್ಥಳೀಯ ಸಮಸ್ಯೆಗಳು ಬಹಳ ಇರುತ್ತವೆ. ಮತದಾರರ ಸಣ್ಣ ಸಂಖ್ಯೆ, ಬಹುಆಯಾಮದ ಸ್ಪರ್ಧೆ ಇರುತ್ತದೆ ಮುನಿಸಿಪಲ್ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಗೆ ಹೋಲಿಕೆ ಮಾಡಲಾಗುವುದಿಲ್ಲ ಎಂದರು.

ಜಯ ನಿಶ್ಚಿತ
ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಭಾಜಪ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುರುಪು, ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ ಜಯ ನಿಶ್ಚಿತ ಎಂದರು.

ಯಾವುದೂ ನಿಜವಾಗಿಲ್ಲ
ಚುನಾವಣಾ ಫಲಿತಾಂಶ ಪರಿಣಾಮ ಬೀರುವುದಿಲ್ಲ ಎಂದಿರುವ ವಿಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿಗಳು ಅವರು ಹಾಗೆಯೇ ಹೇಳಬೇಕು. ಅವರು ಹೇಳಿದ್ದು ಯಾವುದೂ ನಿಜವಾಗಿಲ್ಲ ಎಂದರು.

See also  ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ತಾಲೂಕು ಸೇರ್ಪಡೆಗೆ ಸಚಿವ ಸಂಪುಟ ಒಪ್ಪಿಗೆ: ಜಯಚಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು