ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿ.12ರ ವರೆಗೆ ಚಳಿಯ ಜತೆಗೆ ಮಳೆ ಉಂಟಾಗಲಿದೆ.
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ತೀವ್ರಗೊಂಡು ಚಂಡಮಾರುತವಾಗಿ ಮಾರ್ಪಟ್ಟಿದೆ.
ಗುರುವಾರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಭಾಗಕ್ಕೆ ಈ ಚಂಡಮಾರುತದ ಪ್ರಭಾವ ಬೀರಿದೆ. ಇದರ ಪರಿಣಾಮ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಚಳಿಯ ವಾತಾವರಣ ಸೃಷ್ಟಿಯಾಗಿದೆ.
ಮ್ಯಾಂಡಸ್ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನ ತಾಪಮಾನ ಹಾಗೂ ಗಾಳಿಯ ಗುಣಮಟ್ಟದ ಮೇಲೂ ಪರಿಣಾಮ ಉಂಟಾಗಲಿದೆ. ಶುಕ್ರವಾರ ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನ 6.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.