News Kannada
Monday, January 30 2023

ಬೆಂಗಳೂರು ನಗರ

ಬೆಂಗಳೂರು: ಎಸ್.ನಿಜಲಿಂಗಪ್ಪ ಜನಪರ ಆಡಳಿತಕ್ಕೆ ನಾಂದಿ ಹಾಡಿದವರು- ಸಿಎಂ.ಬೊಮ್ಮಯಿ

Udupi: Chief Minister Basavaraj Bommai says big programmes in budget for coastal areas
Photo Credit : G Mohan

ಬೆಂಗಳೂರು, ಡಿ. 10: ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ನವರು ಆಡಳಿತದ ಭದ್ರ ಬುನಾದಿಯನ್ನು ಹಾಕಿ ಜನಪರವಾದ ಆಡಳಿತ ಮಾಡಲು ನಾಂದಿ ಹಾಡಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್.ನಿಜಲಿಂಗಪ್ಪ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಸ್.ನಿಜಲಿಂಗಪ್ಪ ಅವರು ಕನ್ನಡ ನಾಡಿನ ಪುತ್ರ. ಇಡೀ ನಾಡಿಗೆ ತನ್ನ ಜೀವವನ್ನು ಮೀಸಲಿಟ್ಟು ಕನ್ನಡ, ಕನ್ನಡ ಭಾಷೆಗೆ ಮಾಡಿರುವ ಕೆಲಸ ಕರ್ನಾಟಕವಾಗಲು ಕಾರಣೀಭೂತವಾಗಿದೆ. ತತ್ವ, ಆದರ್ಶ ಮೌಲ್ಯಾಧಾರಿತ ರಾಜಕಾರಣ, ಕರ್ನಾಟಕದಲ್ಲಿ ಮಾಡಿದರು. ಭಾರತದಲ್ಲಿ ಅವರ ಖ್ಯಾತಿ, ಪ್ರಭಾವ ಇತ್ತು. ಸಂವಿಧಾನ ರಚನಾ ಸಮಿತಿಯಿಂದ ಹಿಡಿದು ಎ.ಐ.ಸಿ.ಸಿ ಅಧ್ಯಕ್ಷರಾಗುವವರೆಗೂ ಭಾರತದ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆಡಳಿದಲ್ಲಿ ಸುಧಾರಣೆಗೆ ಮಹತ್ವ ನೀಡಿ, ಆಡಳಿತ ಸುಧಾರಣೆಯನ್ನು ಪ್ರಜಾಪ್ರಭುತ್ವ ಆಗತಾನೆ ಹೊರಹೊಮ್ಮುತ್ತಿರುವ ಸಂದರ್ಭದಲ್ಲಿ ಜನಪರವಾದ, ಜನರ ಪಾಲ್ಗೊಳ್ಳುವಿಕೆಯ ಪ್ರಜಾಪ್ರಭುತ್ವವನ್ನು ನೀಡಿದ್ದಾರೆ ಎಂದರು.

ಪ್ರಾಮಾಣಿಕ ರಾಜಕಾರಣಿ

ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ನಾಟಕದ ಸೇವೆಯನ್ನು ಮಾಡಿದವರು. ನೀರಾವರಿಗೆ ಬಹಳಷ್ಟು ಒತ್ತು ನೀಡಿದವರು. ಇಂದು ನಾವು ಕಾಣುತ್ತಿರುವ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶಗಳು ಅವರ ಕಲ್ಪನೆ ಹಾಗೂ ಕ್ರಿಯಾಯೋಜನೆಗಳು. ಕರ್ನಾಟಕಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ್ದಾರೆ. ಮೌಲ್ಯಾಧಾರಿತ ರಾಜಕಾರಣ ಮಾಡಿದ್ದರು. ಮನಸ್ಸು ಮಾಡಿದ್ದರೆ, ಭಾರತದ ರಾಷ್ಟಪತಿಗಳಾಗಬಹುದಿತ್ತು.

ಆದರೆ ಅವರು ಅದನ್ನು ಒಪ್ಪಲಿಲ್ಲ. ಎಂದಿಗೂ ಅಧಿಕಾರದ ಹಿಂದೆ ಹೋಗಲಿಲ್ಲ. ಅಧಿಕಾರ ಅವರ ಹಿಂದೆ ಬಂದಿತ್ತು. ಎಸ್.ಆರ್ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಿದ್ದಾಗ ಬೆಂಗಳೂರಿಗೆ ಬನ್ನಿ ಎಂದಾಗಲೂ ಅವರು ಒಪ್ಪಲಿಲ್ಲ. ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾದ ಅವರು ನಮ್ಮೆಲ್ಲರಿಗೂ ಆದರ್ಶ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ: ಸಿ.ಸೋಮಶೇಖರ್ ಮತ್ತಿತರರು ಉಪಸ್ಥಿತಿತರಿದ್ದರು.

See also  ಇಬ್ಬರು ಅಪ್ರಾಪ್ತ ಬಾಲಕರ ರಕ್ಷಿಸಿದ ಆರ್ ಪಿಎಫ್ ಸಿಬ್ಬಂದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು