News Kannada
Monday, February 06 2023

ಬೆಂಗಳೂರು ನಗರ

ಬೆಂಗಳೂರು: ಗಡಿ ವಿವಾದ ಕುರಿತು ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ- ಸಿಎಂ ಬೊಮ್ಮಾಯಿ

Bengaluru: Union Home Minister to chair meeting on border dispute, says CM Bommai
Photo Credit : G Mohan

ಬೆಂಗಳೂರು, ಡಿ.10: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15 ರಂದು ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸೋಮವಾರದಂದು ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದೆ. ನಾನೂ ಕೂಡ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ಅವರು ಹೇಳಿ ಕಳಿಸಿದಾಗ ಬರಬೇಕಾಗುವುದು ಎಂದು ಹೇಳಿದ್ದಾರೆ. ಕರ್ನಾಟಕದ ವಿಚಾರ, ನಿಲುವು, ವಾಸ್ತವಾಂಶವನ್ನು ಈಗಾಗಲೇ ತಿಳಿಸಲಾಗಿದೆ. ಹಲವಾರು ವಿವರಗಳನ್ನು ಸಹ ನೀಡಲಾಗಿದೆ. ಭೇಟಿಯಾದ ಸಂದರ್ಭದಲ್ಲಿ ಕರ್ನಾಟಕದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗುವುದು ಎಂದರು.

ಸರ್ವ ಪಕ್ಷದ ಸಭೆ
ಸರ್ವ ಪಕ್ಷದ ಸಭೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಲಾಗಿದೆ. ಸಭೆ ನಿಗದಿಯಾದ ಕೂಡಲೇ ತಿಳಿಸಲಾಗುವುದು ಎಂದು ತಿಳಿಸಿದರು.

See also  ಬಂಟ್ವಾಳ: ಸರಪಾಡಿ ನದಿ ಬದಿಯಲ್ಲಿ ಮೊಸಳೆ ಪತ್ತೆ, ಜಾಗೃತಿ ವಹಿಸುವಂತೆ ಸಂದೇಶ ರವಾನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು