News Kannada
Thursday, February 02 2023

ಬೆಂಗಳೂರು ನಗರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ

Bengaluru: Heavy to very heavy rainfall is likely to occur in several districts of the state for the next four days.
Photo Credit : News Kannada

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆ, ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿ ಒಳನಾಡು, ಕರಾವಳಿಯಲ್ಲಿ ಈಗಾಗಲೇ ಹೆಚ್ಚು ಮಳೆಯಾಗಿದೆ. ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ, ಮಿಂಚಿ ನೊಂದಿಗೆ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಅಂದಹಾಗೇ ಮಾಂಡೌಸ್ ಚಂಡಮಾರುತದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರು ಜಿಲ್ಲೆಯಲ್ಲಿ ಮಳೆಯಿಂದ ಈವರೆಗೆ 212 ಎಕರೆ ರೈತರ ಬೆಳೆ ನಾಶವಾಗಿದೆ. ಟೊಮ್ಯಾಟೋ, ಆಲೂಗಡ್ಡೆ, ಹೂ ಸೇರಿದಂತೆ ಹಲವು ಬೆಳೆ ನಾಶವಾಗಿರೆದ. ಇದಲ್ಲದೇ ವಿವಿಧ ರೋಗಗಳ ಭಾಧೆ ಕೂಡ ಆರಂಭಗೊಂಡಿದೆ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ.

See also  ಹಿಜಾಬ್​ ವಿವಾದ: ಇಂದು ಹೈಕೋರ್ಟ್​​ನಿಂದ ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು