News Kannada
Monday, February 06 2023

ಬೆಂಗಳೂರು ನಗರ

ವೈದ್ಯಕೀಯ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ಡಿ.ಕೆ‌ ಶಿವಕುಮಾರ್

Ramesh Jarkiholi has lost his mental balance and should be given proper treatment: DK Shivakumar
Photo Credit : G Mohan

ಬೆಂಗಳೂರು: ಉಕ್ರೇನ್ – ರಷ್ಯಾ ಯುದ್ಧದ ಪರಿಣಾಮದಿಂದಾಗಿ ಭಾರತಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿರುವ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಷ್ಯಾ-ಉಕ್ರೇನ್‌ ನಡುವಿನ ಯುದ್ಧದ ಸಂದರ್ಭದಲ್ಲಿ ರಾಜ್ಯಕ್ಕೆ ಮರಳಿದ್ದ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿನಲ್ಲಿ ಶಿಕ್ಷಣ ಮುಂದುವರಿಸಲು ಸರ್ಕಾರ ನೆರವಾಗದೇ ಇರುವುದು ದುಃಖಕರ ವಿಚಾರ.” ಎಂದು ತಮ್ಮ ಟ್ವೀಟ್‌ನಲ್ಲಿ ಬೇಸರ ಹೊರಹಾಕಿರುವ ಡಿ.ಕೆ ಶಿವಕುಮಾರ್‌, “ಅತಂತ್ರಗೊಂಡಿರುವ ರಾಜ್ಯದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ.” ಎಂದು ಹೇಳಿದ್ದಾರೆ.

ಉಕ್ರೇನ್-ರಷ್ಯಾ ಯುದ್ಧದ ವೇಳೆ ರಾಜ್ಯದ ಸುಮಾರು 700 ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನಿನಿಂದ ಮರಳಿ ಬಂದಿದ್ದರು. ಇವರನ್ನೂ ಸೇರಿದಂತೆ ಭಾರತದ ಸಾವಿರಾರು ವಿದ್ಯಾರ್ಥಿಗಳು ಭಾರತದಲ್ಲೇ ಶಿಕ್ಷಣ ಮುಂದುವರಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್.ಎಂ.ಸಿ) ನಿರಾಕರಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾದಂತಾಗಿದೆ.

“ಯುದ್ಧ ಸಂತ್ರಸ್ತ ವಿದ್ಯಾರ್ಥಿಗಳು ರಾಜ್ಯದಲ್ಲೇ ಶಿಕ್ಷಣ ಮುಂದುವರಿಸಲು ಪರಿಹಾರವೇನು? ನನ್ನಿಂದ ಹಾಗೂ ಪಕ್ಷದಿಂದ ಏನೇ ಸಹಾಯ ಕೇಳಿದರೂ ಮಾಡಲು ಖಂಡಿತ ಸಿದ್ಧ.” ಎಂದು ಡಿ.ಕೆ ಶಿವಕುಮಾರ್ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ. “ವಿದ್ಯಾರ್ಥಿಗಳು ಈಕೂಡಲೇ ನನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ನೇರ ಸಂದೇಶ (DM) ಕಳಿಸುವ ಮೂಲಕ ಸಂಪರ್ಕಿಸಬಹುದು. ವಿದ್ಯಾರ್ಥಿಗಳ ಬೆನ್ನಿಗೆ ಖಂಡಿತ ನಾವು ನಿಲ್ಲುತ್ತೇವೆ.” ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.

See also  ಇನ್ನು ಚುನಾವಣೆಗೆ ಸ್ಪರ್ಧಿಸಲ್ಲವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು