News Kannada
Tuesday, February 07 2023

ಬೆಂಗಳೂರು ನಗರ

ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಅಸ್ತಿತ್ವಕ್ಕೆ ತರಲಾಗುತ್ತಿದೆ- ಸಿಎಂ

Bengaluru Metropolitan Land Transport Authority to be set up: CM
Photo Credit : G Mohan

ಬೆಂಗಳೂರು: ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಭೂಸಾರಿಗೆ ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು, ಹಲವು ಮಾದರಿಗಳ ಪ್ರಾಧಿಕಾರ, ಇಲಾಖೆಗಳ ಬದಲಾಗಿ ಉನ್ನತಾಧಿಕಾರದ ಒಂದೇ ಸಂಸ್ಥೆ ಸ್ಥಾಪಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯ ಕಲಾಪದಲ್ಲಿ 2022 ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ ವಿಧೇಯಕದ ಕುರಿತು ಅವರು ಮಾತನಾಡಿ, ಬೆಂಗಳೂರು ಮಹಾನಗರಕ್ಕೆ ಸುತ್ತಮುತ್ತಲಿನ ಪುರಸಭೆ,ನಗರಸಭೆಗಳು ಸುಮಾರು 110 ಹಳ್ಳಿಗಳು ಸೇರ್ಪಡೆಯಾಗಿವೆ. ಮಹಾನಗರದ ಮೂಲಸೌಕರ್ಯಗಳಿಗೂ ಗ್ರಾಮೀಣ ಮೂಲಸೌಕರ್ಯಗಳಿಗೂ ವ್ಯತ್ಯಾಸ ಇರುತ್ತದೆ.ಕಳೆದ ಸುಮಾರು 25 ವರ್ಷಗಳಿಂದ ಬೆಂಗಳೂರಿನ ರಸ್ತೆಗಳ ಅಗಲೀಕರಣವಾಗಿಲ್ಲ. ಪ್ರತಿನಿತ್ಯ ಸುಮಾರು 5 ಸಾವಿರಕ್ಕೂ ಹೆಚ್ಚು ಹೊಸವಾಹನಗಳು ರಸ್ತೆಗಿಳಿಯುತ್ತಿವೆ. ಮಹಾನಗರದಲ್ಲಿ ಸುಮಾರು 1 ಕೋಟಿ 25 ಲಕ್ಷ ಜನಸಂಖ್ಯೆ ಇದೆ. ಸುಮಾರು 1 ಕೋಟಿ 3 ಲಕ್ಷ ವಾಹನಗಳಿವೆ.ಬರುವ ದಿನಗಳಲ್ಲಿ ಜನಸಂಖ್ಯೆಗಿಂತ ವಾಹನಗಳ ಸಂಖ್ಯೆಯೇ ಅಧಿಕವಾಗಲಿದೆ. ಇವುಗಳ ನಿರ್ವಹಣೆಯನ್ನು ಬಹುವಿಧದ ಸಂಸ್ಥೆಗಳು ನೋಡಿಕೊಳ್ಳುತ್ತಿವೆ.ಹೊಸ ರಸ್ತೆಗಳ ನಿರ್ಮಾಣಕ್ಕೆ ಭೂಸ್ವಾಧೀನ ಕಾರ್ಯದ ಜವಾಬ್ದಾರಿ ಹಾಗೂ ಸಮಗ್ರ ಪರಿಹಾರ ಕಂಡುಕೊಳ್ಳಲು ವಿಧೇಯಕ ತರಲಾಗುತ್ತಿದೆ.

ಗೊರಗುಂಟೆ ಪಾಳ್ಯದ ಬಳಿ ಬಹು ಹಂತದ ಪಥ ,ಹೆಬ್ಬಾಳ ಮೇಲ್ಸೇತುವೆ ಅಗಲೀಕರಣ ಸೇರಿದಂತೆ ಬೇರೆ ಊರುಗಳಿಂದ ಪ್ರವೇಶಿಸುವ ಮಾರ್ಗಗಳ ವಿಸ್ತಾರಕ್ಕೆ ಕ್ರಮವಹಿಸಲಾಗಿದೆ.ಬೆಂಗಳೂರಿನ ಸಂಚಾರದ ವೈಜ್ಞಾನಿಕ ನಿರ್ವಹಣೆಗೆ ಅಧ್ಯಯನಕ್ಕೆ ಐಐಎಸ್ಸಿ ಗೆ ಕೋರಲಾಗಿದೆ.ಈ ಹಿಂದಿನ ವರದಿಗಳನ್ನು ಪುನರ್ ಪರಿಶೀಲನೆ ಮಾಡಲಾಗುವುದು.ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಂಘೈ, ಲಂಡನ್, ನ್ಯೂಯಾರ್ಕ್ ಮತ್ತಿತರ ನಗರಗಳ ಸಂಚಾರ ನಿರ್ವಹಣೆಯನ್ನೂ ಕೂಡ ಅಧ್ಯಯನ ಮಾಡಲಾಗುವುದು. ಸಂಚಾರ ನಿರ್ವಹಣೆಗೆ ಎಡಿಜಿಪಿ ಹಂತದ ಅಧಿಕಾರಿ ನೇಮಿಸಿ ಇಲಾಖೆಯ ಸಾಮಥ್ರ್ಯ ಹೆಚ್ಚಿಸಲಾಗಿದೆ.ಐದು ಕಡೆ ಹೊಸ ಸಂಚಾರ ಪೆÇಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಈಗ ಸಾಕಷ್ಟು ಸುಧಾರಣೆಗಳು ಕಂಡು ಬಂದಿವೆ. ಸಂಚಾರ್ ಕಮಾಂಡ್ ಕೇಂದ್ರ ಹಾಗೂ 7 ಸಾವಿರ ನಿರ್ಭಯ ಕ್ಯಾಮೆರಾಗಳನ್ನು ಕೂಡ ಸಂಚಾರ ನಿಗಾ ಉದ್ದೇಶಕ್ಕೂ ಕೂಡ ಬಳಕೆ ಮಾಡಲಾಗುತ್ತಿದೆ. ರಸ್ತೆ ನಿರ್ಮಾಣ, ಸಂಚಾರ ನಿರ್ವಹಣೆ ಸುಧಾರಣೆಗೆ ನಾಗರಿಕರ ಸಹಕಾರ ಅಗತ್ಯ. ಸಾರಿಗೆ ಸಂಚಾರ ಲೋಪಗಳಿಗೆ ಖುದ್ದಾಗಿ ದಂಡ ಹಾಕುವ ಬದಲು ಕ್ಯಾಮೆರಾಗಳ ಮೂಲಕ ದಂಡ ವಿಧಿಸಲು ಪ್ರಾರಂಭವಾದ ನಂತರ ಹೆಚ್ಚು ದಂಡ ಸಂಗ್ರಹವಾಗುತ್ತಿದೆ. ಬೆಂಗಳೂರು ಮಹಾನಗರಕ್ಕೆ ರಿಂಗ್ ರಸ್ತೆ, ಪೆರಿಫೆರಲ್ ರಿಂಗ್ ರಸ್ತೆ ಮತ್ತಿತರ ಕಾಮಗಾರಿಗಳ ಭೂಸ್ವಾಧೀನ ಕಾರ್ಯ,ಮೆಟ್ರೋ ಮಾರ್ಗದ ವಿಸ್ತರಣೆ ಮೊದಲಾದ ಕಾರ್ಯಗಳನ್ನು ಕೈಗೊಳ್ಳಲಾಗುವುದು ವಿಧೇಯಕದ ಕುರಿತು ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ ಉದ್ದೇಶಿತ ಪ್ರಾಧಿಕಾರದಲ್ಲಿ ಬೆಂಗಳೂರಿನಿಂದ ಚುನಾಯಿತರಾದ ಶಾಸಕರು ಅಥವಾ ಸಚಿವರನ್ನು ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಶಾಸಕರಾದ ಅರವಿಂದ ಲಿಂಬಾವಳಿ, ಎನ್.ಎ.ಹ್ಯಾರಿಸ್, ಆರ್.ಮಂಜುನಾಥ ಮತ್ತಿತರರು ಮಾತನಾಡಿದರು.

ಇದಕ್ಕೂ ಮೊದಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಂಡಿಸಿದ್ದ ವಿಧೇಯಕವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದ ಪರ್ಯಾಲೋಚನೆಗೆ ಹಾಕಿ ವಿಧೇಯಕವು ಧ್ವನಿಮತದ ಮೂಲಕ ಸರ್ವಾನುಮತದ ಅಂಗೀಕಾರ ಪಡೆದಿದೆ ಎಂದು ಘೋಷಿಸಿದರು.

See also  2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿ ಘೋಷಣೆ ಮಾಡಿದ ಕ್ರೀಡಾ ಇಲಾಖೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು