News Kannada
Wednesday, February 08 2023

ಬೆಂಗಳೂರು ನಗರ

ಬೆಂಗಳೂರು: ಗಡಿ ವಿವಾದ- ಸಿಎಂಗೆ ಡಿಕೆ ಶಿವಕುಮಾರ್‌ ಸವಾಲು

Mandya: Prajadhvani Yatra to understand the pain and problems of the people and provide relief. Shivakumar
Photo Credit : G Mohan

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ನೀಡಿರುವ ಪೊಳ್ಳು ಹೇಳಿಕೆಯ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿ, ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬ ಮಾತಿಗೆ ಡಿ.ಕೆ‌ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್ “ಮುಖ್ಯಮಂತ್ರಿಗಳು ಈ ರೀತಿ ಪೊಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಆಶ್ಚರ್ಯಕರವೇನಲ್ಲ” ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟುಕೊಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸಿದ್ಧರಿಲ್ಲದಿದ್ದರೆ, ಇಷ್ಟರಲ್ಲಾಗಲೇ ಕ್ರಮ ಕೈಗೊಳ್ಳಬೇಕಿತ್ತು ಎಂದಿರುವ ಅವರು, “ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದಿಲ್ಲಿಗೆ ಕರೆದುಕೊಂಡು ಹೋಗಲಿ ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕ ಭರವಸೆ ನೀಡಲಿ” ಎಂದು ಸವಾಲೆಸೆದಿದ್ದಾರೆ.

ಈ‌ ಮೂಲಕ ಬೊಮ್ಮಾಯಿಯವರ ಪೊಳ್ಳು ಭರವಸೆಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿರುವ ಡಿ.ಕೆ ಶಿವಕುಮಾರ್, ಕೇಂದ್ರ ಗೃಹ ಸಚಿವರು ಸಾರ್ವಜನಿಕ‌ ಭರವಸೆ ನೀಡುವಂತೆ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

See also  ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕ್ರಮ; ಸಚಿವೆ ಸ್ಮೃತಿ ಇರಾನಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು