ಬೆಂಗಳೂರು, ಡಿ.31: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ವ್ಯಕ್ತಿಯೊಬ್ಬನಿಂದ 28.73 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಮಾಲ್ಡೀವ್ಸ್ನಿಂದ ಆಗಮಿಸಿದ ವ್ಯಕ್ತಿ ತನ್ನ ಗುದನಾಳದಲ್ಲಿ ಮೂರು ಅಂಡಾಕಾರದ ಪ್ಯಾಕೆಟ್ಗಳಲ್ಲಿ 532.21 ಗ್ರಾಂ ಚಿನ್ನದ ಪೇಸ್ಟ್ ಅನ್ನು ಅಡಗಿಸಿಟ್ಟಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಶಪಡಿಸಿಕೊಳ್ಳಲಾದ ಚಿನ್ನದ ಬೆಲೆ 28,73,934 ರೂ. ಆಗಿರುತ್ತದೆ. ಡಿಸೆಂಬರ್ 29 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದಿದ್ದು, ಆತ ಒಳ ಉಡುಪುಗಳಲ್ಲಿ 210.35 ಗ್ರಾಂ ಚಿನ್ನವನ್ನು ಬಚ್ಚಿಟ್ಟಿದ್ದ ಎನ್ನಲಾಗಿದೆ.
ವಶಪಡಿಸಿಕೊಳ್ಳಲಾದ ಚಿನ್ನದ ಮಾರುಕಟ್ಟೆ ಬೆಲೆ ಸುಮಾರು 11,18,103 ರೂ. ಆಗಿರುತ್ತದೆ.