ಬೆಂಗಳೂರು: ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಬಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರ ಮತ್ತು ನ್ಯಾಷನಲ್ ಅಕಾಡೆಮಿ ಆಫ್ ಝಡ್ಸೆಟ್ (ನಾರ್) ನ ಸಹಯೋಗದೊಂದಿಗೆ ರಾಷ್ಟ್ರಮಟ್ಟದ ಹಣಕಾಸು ಸಾಕ್ಷರತೆ ಸಮಾವೇಶವನ್ನು ಜ. 11 ರಂದು ಬೆಂಗಳೂರಿನ “ಲೀಲಾ ಭಾರತೀಯ ಸಿಟಿ ಹೊಟೇಲ್ ನಲ್ಲಿ ಹಮ್ಮಿಕೊಂಡಿದೆ.
ಈ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳ 350 ಪ್ರತಿನಿಧಿಗಳು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರು, ರಾಜ್ಯದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜೀವನೋಪಾಯ ಅಭಿಯಾನದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಬಾರ್ಡ್, ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳು, ಭಾರತೀಯ ರಿಸರ್ವ್ ಬ್ಯಾಂಕ್, ವಿಶ್ವ ಬ್ಯಾಂಕ್, ಕ್ಷೇತ್ರ ಪರಿಣಿತರು, ಸ್ವ-ಸಹಾಯ ಗುಂಪಿನ ಮಹಿಳೆಯರು ಭಾಗವಹಿಸುತ್ತಿದ್ದಾರೆ.
ಸಮಾವೇಶವನ್ನು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಕಾರ್ಯದರ್ಶಿಗಳಾದ ಶೈಲೇಶ್ ಕುಮಾರ್ ಸಿಂಗ್ ರವರು ಉದ್ಘಾಟಿಲಿದ್ದಾರೆ. ”ಆಜಾದಿ ಕಾ ಅಮೃತ ಮಹೋತ್ಸವ”ದ ಆಚರಣೆಯಡಿ ರಾಷ್ಟ್ರೀಯ ಸಮಾವೇಶಕ್ಕೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವರಾದ ಮಾನನೀಯ ಸಾದ್ವಿ ನಿರಂಜನ್ ಜ್ಯೋತಿ ರವರು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಿದ್ದಾರೆ.
ಹಣಕಾಸು ಸೇರ್ಪಡೆ ಯೋಜನೆಯಲ್ಲಿ ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬ್ಯಾಂಕಿನ ವ್ಯವಸ್ಥೆ ಕಡ್ಡಾಯವಾಗಿ ಕಲ್ಪಿಸಬೇಕಾಗಿದೆ. ಅದರಂತೆ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಸ್ವ-ಸಹಾಯ ಗುಂಪಿನ ಸದಸ್ಯರುಗಳಿಗೆ ಉಳಿತಾಯ, ಹಣ ನಿರ್ವಹಣೆ, ಸಾಲ ಮತ್ತು ಇತರೆ ಸೌಲಭ್ಯಗಳನ್ನು ನೀಡುತ್ತದೆ. ಪ್ರತಿಯೊಬ್ಬರಿಗೂ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ರವರು, ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಕಾರ್ಯದರ್ಶಿಗಳು, ರಾಜ್ಯದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.