ಬೆಂಗಳೂರು: ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳದ ರಾಜ್ಯ ಉಪಾಧ್ಯಕ್ಷರನ್ನಾಗಿ ವಿಶ್ವಕರ್ಮ ನಾಡೋಜ ಡಾ.ಬಿ.ಎಂ.ಉಮೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಈ ನೇಮಕಾತಿ ಮಾಡಿದ್ದು, ವಿಧಾನಸಭೆ ಚುನಾವಣೆ ಸನಿಹದಲ್ಲಿರುವ ಈ ಸಂದರ್ಭದಲ್ಲಿ ಡಾ.ಬಿ.ಎಂ.ಉಮೇಶ್ ಕುಮಾರ್ ಅವರನ್ನು ಮತ್ತೊಮ್ಮೆ ಉಪಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ತಾವು ಈ ಗುರುತರ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ದರಾಗಿ ಪಕ್ಷದ ಎಲ್ಲಾ ಸಮುದಾಯದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವಂತೆ ಇಬ್ರಾಹಿಂ ಕಿವಿಮಾತು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಾ.ಬಿ.ಎಂ. ಉಮೇಶ್ ಕುಮಾರ್, ಮತ್ತೊಮ್ಮೆ ಉಪಾಧ್ಯಕ್ಷರನ್ನಾಗಿ ನೇಮಿಸಿರುವ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಎಚ್.ಡಿ. ಕುಮಾರ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಮುಖಂಡ ಟಿ.ಎ.ಶರವಣ ಅವರಿಗೆ ಆಭಾರಿಯಾಗಿದ್ದೇನೆ. ಮತ್ತೊಮ್ಮೆ. ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿ ಮಾಡುವುದು ತಮ್ಮೆಲ್ಲರ ಗುರಿಯಾಗಿದ್ದು, ಶೀಘ್ರದಲ್ಲೇ ಬೃಹತ್ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.