ಬೆಂಗಳೂರು: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆ.ಆರ್.ಮಾರ್ಕೆಟ್ ಫ್ಲೈಓವರ್ ಬಳಿ ನಡೆದಿದೆ.
ಮೃತ ದುರ್ದೈವಿಯನ್ನು ಕಬೀರ್ ಪಾಷಾ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಕುಳಿತಿದ್ದ ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಘಟನೆ ಸುಮಾರು ತಡರಾತ್ರಿ ಸಂಭವಿಸಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಕಬೀರ್ ಮೃತದೇಹ ಸ್ಥಳಾಂತರಿಸಲಾಗಿದೆ. ಹಾಗೂ ಸಿಟಿ ಮಾರ್ಕೆಟ್ ಠಾಣೆ ಪೊಲೀಸರಿಂದ ತನಿಖೆ ಮುಂದುವರೆದಿದೆ.