ಬೆಂಗಳೂರು: ದೇವಸ್ಥಾನಗಳಿಗೆ ಭೇಟಿ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಪುಸ್ತಕದೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಿ ಬಜೆಟ್‌ಗೆ ಅನುಮೋದನೆ ಪಡೆದಿದ್ದಾರೆ. ಬಜೆಟ್ ಪ್ರತಿಗಳನ್ನು ಪೊಲೀಸರು ವಿಧಾನಸೌಧಕ್ಕೆ ತಲುಪಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭವಾಗಲಿದೆ.