ಬೆಂಗಳೂರು: ಉಡುಪಿಯಲ್ಲಿ ಯಕ್ಷ ರಂಗಾಯಣ ಸ್ಥಾಪನೆ ಮಾಡುವುದಾಗಿ ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ದಾವಣಗೆರೆಯಲ್ಲಿ 3ನೇ ಕನ್ನಡ ವಿಶ್ವ ಸಮ್ಮೇಳನ, ಬೆಂಗಳೂರಿನಲ್ಲಿ ಬಂಜಾರ ಸಂಸ್ಕೃತಿ, ಭಾಷಾ ಅಕಾಡೆಮಿ ಸ್ಥಾಪಿಸುವುದಾಗಿ ಸಿಎಂ ತಿಳಿಸಿದ್ದಾರೆ.
ಆರಕ್ಷರಿಗೆ ಬಲ: ಪೊಲೀಸ್ ಇಲಾಖೆಯಲ್ಲಿ 2 ಸಾವಿರ ಹುದ್ದೆ ಭರ್ತಿ, ಪೊಲೀಸ್ ಸಿಬ್ಬಂದಿ ವಾಹನ ಖರೀದಿಗೆ 50 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ.
ಎಲ್ಲ ಜಿಲ್ಲೆಗಳಲ್ಲಿ ಜಿಮ್: 100 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಯುವಜನತೆ, ವಿಶೇಷ ಚೇತನರು, ಮಹಿಳೆಯರಿಗಾಗಿ ಜಿಮ್ ಸ್ಥಾಪನೆಗೆ ಕ್ರಮ. ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ. ಪ್ರೋತ್ಸಾಹಧನ ಘೋಷಣೆ ಮಾಡಿದ್ದಾರೆ.
ಉಚಿತ ವಿದ್ಯುತ್ ಕೊಡುಗೆ: ಎಸ್‌ಸಿ, ಎಸ್‌ಟಿ ಸಮುದಾಯದ ಮನೆಗೆ 75 ಯೂನಿಟ್ ಉಚಿತ ವಿದ್ಯುತ್ ಕೊಡುಗೆ ನೀಡಿದ್ದಾರೆ.