News Kannada
Saturday, April 01 2023

ಬೆಂಗಳೂರು ನಗರ

ರಾಷ್ಟ್ರದ ಅಭಿವೃದ್ಧಿಗೆ ತಾಂತ್ರಿಕ ಪ್ರಗತಿ ಅಗತ್ಯ: ಗೆಹ್ಲೋಟ್

Technological advancements essential for nation's development: Gehlot
Photo Credit : By Author

ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ತಾಂತ್ರಿಕ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತಿದ್ದು, ತಾಂತ್ರಿಕ ಗುಣಮಟ್ಟದ ಶಿಕ್ಷಣವು ಯುವಕರಿಗೆ ಕೌಶಲ್ಯ ಮತ್ತು ಶ್ರೇಷ್ಠತೆಯನ್ನು ಒದಗಿಸುವುದರೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ತಾಂತ್ರಿಕ ಪ್ರಗತಿಯು ಬಹುಮುಖ್ಯವಾಗಿದೆ ಎಂದು   ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಅಭಿಪ್ರಾಯಪಟ್ಟರು.

ವಿಟಿಯು ನ ಜ್ಞಾನ ಸಂಗಮ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ 22ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರಾಯೋಗಿಕ ಮತ್ತು ಸೈದ್ಧಾಂತಿಕ, ತಾಂತ್ರಿಕ ಜ್ಞಾನ ಮತ್ತು ಸಂಶೋಧನೆ ಮತ್ತು ನಾವೀನ್ಯತೆಯನ್ನು ನೀಡುವ ಉದ್ದೇಶದಿಂದ ಭಾರತ ರತ್ನ, ಸರ್ ಎಂ. ವಿಶ್ವೇಶ್ವರಯ್ಯ ಅವರ ಸ್ಮರಣಾರ್ಥ 1998 ರಲ್ಲಿ ಸ್ಥಾಪಿಸಲಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಭಾರತದ ಅತಿದೊಡ್ಡ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ಸರ್ ಎಂ.ವಿಶ್ವೇಶ್ವರಯ್ಯ ಅವರು ಅದ್ಭುತ ಇಂಜಿನಿಯರ್, ಅವರ ದೂರದೃಷ್ಟಿ ಮತ್ತು ಇಂಜಿನಿಯರಿಂಗ್‍ಗೆ ಸ್ಫೂರ್ತಿ ಮತ್ತು ಅವರು ಶ್ರೇಷ್ಠ ಸಂಸ್ಥೆ ನಿರ್ಮಾಪಕರು ಎಂದು ಶ್ಲಾಘಿಸಿದರು.

ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ ರಾಜ್ಯಪಾಲರು, ಈ ವಿಶ್ವವಿದ್ಯಾನಿಲಯದಿಂದ ನೀವು ಪಡೆಯುವ ಗುಣಮಟ್ಟದ ತಾಂತ್ರಿಕ ಶಿಕ್ಷಣ ಮತ್ತು ಬಲವಾದ ನೈತಿಕ ಅಡಿಪಾಯವು ನಿಮ್ಮ ವೃತ್ತಿಜೀವನವನ್ನು ಯಶಸ್ವಿಯಾಗಿಸುತ್ತದೆ ಮತ್ತು ಜೀವನದ ಹಾದಿಯಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ ಎಂದ ನಂಬಿಕೆ ಇದೆ. ಶಿಕ್ಷಣವು ಜೀವನದ ಯಶಸ್ಸಿಗೆ ಬಹಳಷ್ಟು ಕೊಡುಗೆ ನೀಡುತ್ತದೆ, ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ, ಒಬ್ಬ ವ್ಯಕ್ತಿಯು ವಿದ್ಯಾವಂತನಾಗಿದ್ದರೆ ಅವನ ಅಭಿವೃದ್ಧಿ ಉತ್ತಮವಾಗಿರುತ್ತದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯದಿಂದ ಉತ್ತಮ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.

ನಮ್ಮ ಹಳೆಯ ಶಿಕ್ಷಣ ವ್ಯವಸ್ಥೆಯು ಗುಣಮಟ್ಟದಿಂದ ಸಮೃದ್ಧವಾಗಿತ್ತು, ಇದರಿಂದಾಗಿ ನಾವು ವಿಶ್ವಗುರು ಎಂದು ಪರಿಗಣಿಸಲ್ಪಟ್ಟಿದ್ದೇವೆ ಮತ್ತು ನಮ್ಮ ಆರ್ಥಿಕತೆಯು ನಮ್ಮ ದೇಶವನ್ನು ಚಿನ್ನದ ಹಕ್ಕಿ ಎಂದು ಕರೆಯುವಷ್ಟು ಪ್ರಬಲವಾಗಿತ್ತು. ಇದನ್ನು ಮತ್ತೊಮ್ಮೆ ಸಾಧಿಸಲು, ನಮ್ಮ ಯುವ ಕೌಶಲ್ಯಗಳು, ಪ್ರತಿಭೆಗಳು ಮತ್ತು ಶಕ್ತಿಗಳನ್ನು ಪ್ರದರ್ಶಿಸುವ ಮೂಲಕ ನಾವು ಸಂಘಟಿತ ಪ್ರಯತ್ನಗಳನ್ನು ಮಾಡಬೇಕು ಎಂದು ಕರೆ ನೀಡಿದರು.

ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಸಂಪ್ರದಾಯವು ಬಹಳ ಪುರಾತನವಾಗಿದೆ ಮತ್ತು ಪ್ರಾಚೀನ ಕಾಲದಿಂದಲೂ “ವಾಸುದೇವಂ ಕುಟುಂಬಕಂ” ತತ್ವಶಾಸ್ತ್ರ ಮತ್ತು ಧ್ಯಾನದ ಮೇಲೆ ಕೇಂದ್ರೀಕೃತವಾಗಿದೆ ಮತ್ತು “ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ” ಎಂಬ ಮನೋಭಾವದಿಂದ ಪ್ರೇರಿತವಾಗಿದೆ. ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಣ, ಕೌಶಲ್ಯ ಮತ್ತು ನೈತಿಕ ಮೌಲ್ಯಗಳನ್ನು ಜೋಡಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತ, ಆತ್ಮನಿರ್ಭರ ಭಾರತ್ ಮಾಡಲು ಬದ್ಧರಾಗಿದ್ದಾರೆ. ಇದಕ್ಕೆ ಯುವಪೀಳಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲವಾಗಿ ಮತ್ತು ಯಶಸ್ವಿಯಾಗುವಂತೆ ಮಾಡಲಿದೆ. ನವ ಭಾರತ ನಿರ್ಮಾಣದಲ್ಲಿ ಇದರ ಪಾತ್ರ ನಿರ್ಣಾಯಕವಾಗಿರುತ್ತದೆ. ಈ ಶಿಕ್ಷಣ ನೀತಿಯ ಗುರಿಯು ಎಲ್ಲರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು, ಮಾತೃಭಾಷೆಯಲ್ಲಿ ಅಧ್ಯಯನದ ಜೊತೆಗೆ ನೆಚ್ಚಿನ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುತ್ತದೆ. ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸುವಲ್ಲಿ ನಿಮ್ಮ ಕೊಡುಗೆಯನ್ನು ನೀಡಿ ಮತ್ತು ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿ ಮಾಡಲು ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸಿ ಎಂದರು.

See also  ಲಾಕ್ ಡೌನ್ ಸಡಿಲಿಕೆ: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷ ಪ್ರೊ. ಟಿ.ಜಿ.ಸೀತಾರಾಮ್, ಕುಲಪತಿ ಪ್ರೋ ವಿದ್ಯಾಶಂಕರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು