News Kannada
Friday, March 31 2023

ಬೆಂಗಳೂರು ನಗರ

ಬೆಂಗಳೂರು: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ನಿವೃತ್ತಿದಾರರ ಪಾಲು ಅಮೂಲ್ಯ- ರಾಜ್ಯಪಾಲರು

Bengaluru: Retirees play an invaluable role in the country's economic development: Governor
Photo Credit : By Author

ಬೆಂಗಳೂರು: ದೇಶದಲ್ಲಿ ಬ್ಯಾಂಕಿಂಗ್ ಕ್ಷೇತ್ರವು ಕಳೆದ ದಶಕಗಳಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿದೆ ಮತ್ತು ದೇಶದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದೆ. ಇದರಲ್ಲಿ ಬ್ಯಾಂಕ್ ನಿವೃತ್ತಿದಾರರ ಪಾತ್ರವು ಅಮೂಲ್ಯವಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟ ಆಯೋಜಿಸಿದ್ದ ನಿವೃತ್ತ ಬ್ಯಾಂಕರ್‌ಗಳ 6ನೇ ತ್ರೈವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದು ಭಾರತವು ವಿಶ್ವದಲ್ಲಿ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇಂದು ಭಾರತದ ಆರ್ಥಿಕತೆಯು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇದರಲ್ಲಿ ನೀವು ಮತ್ತು ಬ್ಯಾಂಕ್‌ಗಳು ಪ್ರಮುಖ ಪಾತ್ರ ವಹಿಸಿದ್ದೀರಿ. ಬ್ಯಾಂಕುಗಳು ಆರ್ಥಿಕತೆಯ ಜೀವನಾಡಿಯಾಗಿದ್ದು, ಆರ್ಥಿಕ ಬೆಳವಣಿಗೆಯನ್ನು ಸಕ್ರಿಯಗೊಳಿಸುವಲ್ಲಿ ಮತ್ತು ಉಳಿಸಿಕೊಳ್ಳುವಲ್ಲಿ ವೇಗವರ್ಧಕ ಪಾತ್ರವನ್ನು ವಹಿಸುತ್ತವೆ ಎಂದರು.

ಭಾರತೀಯ ಆರ್ಥಿಕತೆಯನ್ನು ಬೆಂಬಲಿಸುವಲ್ಲಿ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು ಮಹತ್ವದ ಕೊಡುಗೆಯನ್ನು ಹೊಂದಿವೆ. ಭಾರತವನ್ನು ಯುಎಸ್ ಡಿ 5 ಟ್ರಿಲಿಯನ್ ಆರ್ಥಿಕತೆಯ ಗುರಿಯತ್ತ ಸಾಗಲು, ನಮ್ಮ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವುದು ಅವಶ್ಯಕ ಎಂದು ಹೇಳಿದರು.

ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿವಿಧ ಸರ್ಕಾರಿ ಬ್ಯಾಂಕ್‌ಗಳು, ಖಾಸಗಿ ಬ್ಯಾಂಕ್‌ಗಳು, ಗ್ರಾಮೀಣ ಬ್ಯಾಂಕ್‌ಗಳು ಮತ್ತು ವಿದೇಶಿ ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸಿ ಪ್ರಮುಖ ಪಾತ್ರವಹಿಸಿ ನಿವೃತ್ತಿ ಹೊಂದಿದ್ದಾರೆ. ಅವರ ಈ ಕೊಡುಗೆ ಸ್ಮರಣೀಯ. ಬ್ಯಾಂಕ್ ನಿವೃತ್ತ ಉದ್ಯೋಗಿಗಳು ಸೇವಾ ಅವಧಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಮೂಲಕ ದೇಶವಾಸಿಗಳಿಗೆ ಸೇವೆ ಸಲ್ಲಿಸುತ್ತಾ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದು ನಿವೃತ್ತಿಯ ನಂತರವೂ ಸಮಾಜ ಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಸಂತಸದ ವಿಷಯ ಎಂದು ಶ್ಲಾಘಿಸಿದರು.

ಕೋವಿಡ್ ಅವಧಿಯಲ್ಲಿ, ದೇಶವು ಭೀಕರ ದುರಂತವನ್ನು ಎದುರಿಸುತ್ತಿರುವಾಗ, ದೇಶವಾಸಿಗಳಿಗೆ ನಿರಂತರವಾಗಿ ಆರ್ಥಿಕ ಸೇವೆಗಳನ್ನು ಒದಗಿಸುವ ಮೂಲಕ ಮಾನವೀಯತೆಯನ್ನು ಮೆರೆದ ತಮ್ಮೆಲ್ಲರಿಗೂ ಅಭಿನಂದನೆಗಳೂ ಎಂದ ಅವರು, ನಿವೃತ್ತಿಯ ನಂತರವೂ ನಿಮ್ಮ ಈ ಸಮಾಜ ಸೇವೆ ನಿರಂತರವಾಗಿರಲಿ ಎಂದು ಮನವಿ ಮಾಡಿದರು.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ, ಭಾರತವು ಎಲ್ಲಾ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಲು ಹಲವು ಅರ್ಥಪೂರ್ಣ ಕ್ರಮಗಳನ್ನು ತೆಗೆದುಕೊಂಡಿದೆ, ಈ ಕಾರಣದಿಂದಾಗಿ ಇಂದು ಭಾರತವು ವಿಶ್ವದ ಸೂಪರ್ ಪವರ್ ಆಗಿ ಹೊರಹೊಮ್ಮುತ್ತಿದೆ. ಇದಕ್ಕಾಗಿ ಬ್ಯಾಂಕಿಂಗ್ ಕ್ಷೇತ್ರ ಸೇರಿದಂತೆ ಪ್ರತಿಯೊಂದು ವಲಯವು ವಿಶೇಷ ಕೊಡುಗೆ ಇದೆ. ದೇಶದಲ್ಲಿ 18 ನೇ ಶತಮಾನದಲ್ಲಿ ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಬ್ಯಾಂಕುಗಳನ್ನು ಪ್ರಾರಂಭಿಸಲಾಯಿತು, ಇದು ಆರ್ಥಿಕ ವ್ಯವಸ್ಥೆಯ ಅಡಿಪಾಯ ಎಂದು ಸಾಬೀತಾಯಿತು. ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಭಾರತ ಸರ್ಕಾರವು ಹಲವಾರು ರಿಯಾಯಿತಿ ಯೋಜನೆಗಳನ್ನು ಮಾಡಿದೆ, ನೀವು ಸಹ ಆ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ದೇಶ ನಮಗೆ ಬಹಳಷ್ಟು ನೀಡಿದೆ, ಈಗ ದೇಶಕ್ಕಾಗಿ ಏನನ್ನಾದರೂ ಮಾಡುವುದು ನಮ್ಮ ಕರ್ತವ್ಯ. ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಂಚನೆಗಳು ಅದರಲ್ಲೂ ಸೈಬರ್ ಕ್ರೈಂಗಳು ಹೆಚ್ಚಾಗಿವೆ. ನಿಮ್ಮ ಅನುಭವದಿಂದ ಶ್ರೀಸಾಮಾನ್ಯನನ್ನು ತೊಂದರೆಯಿಂದ ಪಾರು ಮಾಡುವ ಮೂಲಕ ಸಮಾಜ ಸೇವೆ ಮಾಡಬಹುದು. ನಿವೃತ್ತ ಬ್ಯಾಂಕ್ ನೌಕರರು ಸುದೀರ್ಘ ಕೆಲಸದ ಅನುಭವವನ್ನು ಹೊಂದಿದ್ದೀರಿ, ಬ್ಯಾಂಕಿಂಗ್ ವಲಯ ಮತ್ತು ಸಾರ್ವಜನಿಕರ ಹಿತಾಸಕ್ತಿಯಲ್ಲಿ ಸಹಕಾರವನ್ನು ಒದಗಿಸುವ ದೃಷ್ಟಿ ನಿಮ್ಮಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಜ್ಞರ ಕೊರತೆಯಾಗದಂತೆ ನಿಮ್ಮ ಅನುಭವವನ್ನು ನಿಮ್ಮ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಬೇಕು ಹಾಗೂ ಸಮಸ್ಯೆ ಬಗೆಹರಿಸಲು ಸಹಾಯ ಮಾಡಬೇಕು ಎಂದು ತಿಳಿಸಿದರು.

See also  ಪತ್ನಿಯ ಅನೈತಿಕ ಸಂಬಂಧ: ನೆರೆಮನೆಯಾಕೆಯ ಮಗು ಕೊಂದ ಪತಿ!

ಕಾರ್ಯಕ್ರಮದಲ್ಲಿ ಅಖಿಲ ಭಾರತ ಬ್ಯಾಂಕ್ ನಿವೃತ್ತರ ಸಂಘದ ಅಧ್ಯಕ್ಷ ಎಸ್.ಎಂ. ದೇಶಪಾಂಡೆ, ಕೆ.ಕೆ.  ಶ್ರೀನಿವಾಸನ್, ಪ್ರಧಾನ ಕಾರ್ಯದರ್ಶಿ ಎಸ್.  ಸಿ. ಜೈನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ವಿ ವಿಶ್ವನಾಥ್ ನಾಯ್ಕ್, ಕಾರ್ಯದರ್ಶಿ ಮಲ್ಲಿಕಾರ್ಜುನ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

31125

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು