ಬೆಂಗಳೂರು: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರ ನಿವಾಸದಿಂದ ಲೋಕಾಯುಕ್ತರು 6 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.
ಮೂಲಗಳ ಪ್ರಕಾರ, ಲೋಕಾಯುಕ್ತ ಪೊಲೀಸರು ಸಂಜಯನಗರದಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸಿದರು, ಅಲ್ಲಿ ಈ ನಗದು ಪತ್ತೆಯಾಗಿದೆ.
ಲಂಚ ಸ್ವೀಕರಿಸುತ್ತಿದ್ದ ಪ್ರಶಾಂತ್ ಮಾಡಾಳ್ ಸೇರಿದಂತೆ ಐವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚಿನ ತನಿಖೆಗಾಗಿ ಲೋಕಾಯುಕ್ತರು ವಿರೂಪಾಕ್ಷಪ್ಪ ಅವರನ್ನು ಕರೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆ ಆಡಳಿತಾರೂಢ ಬಿಜೆಪಿಗೆ ದೊಡ್ಡ ಮುಜುಗರ ತಂದಿದೆ.