ಬೆಂಗಳೂರು: ಕೆಎಸ್‌ಡಿಎಲ್ ಸಂಸ್ಥೆಗೆ ರಾಸಾಯನಿಕ ಪೂರೈಕೆ ಸಂಬಂಧ ಲಂಚ ಪಡೆಯುವಾಗ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ಪೊಲೀಸರ ವಶವಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕೈ ನಾಯಕರು, ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.
ಈ ಸಂದರ್ಭ ಮಾತನಾಡಿ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ ಹಿಂದೆಂದು ಕಂಡಿರದಷ್ಟು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಪೊಲೀಸ್ ವರ್ಗಾವಣೆ, ನೇಮಕಾತಿ, ವಿವಿ ಉಪನ್ಯಾಸಕರ ನೇಮಕಾತಿ ಸೇರಿದಂತೆ ಪ್ರತಿ ಕ್ಷೇತ್ರದಲ್ಲೂ ಭ್ರಷ್ಟಾಚಾರ ನಡೆಸುತ್ತಿದೆ ವಾಗ್ದಾಳಿ ನಡೆಸಿದರು.
ಪ್ರತಿಭಟನಾಕಾರರು ಪೊಲೀಸ್ ವಶ: ಸಿದ್ದರಾಮಯ್ಯ ಸೇರಿದಂತೆ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.