News Kannada
Saturday, April 01 2023

ಬೆಂಗಳೂರು ನಗರ

ಬೆಂಗಳೂರು : ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ

Bengaluru: The Congress is likely to release its list of candidates on March 17.
Photo Credit : News Kannada

ಬೆಂಗಳೂರು : ಕಾಂಗ್ರೆಸ್​​ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದೆ. ನಿನ್ನೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತದಲ್ಲಿ 120 ಕ್ಷೇತ್ರಗಳ ಸಂಭಾವ್ಯ ಟಿಕೆಟ್​ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಹಿರಿಯ ನಾಯಕರು ನಿನ್ನೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಮಧ್ಯಾಹ್ನದಿಂದ ರಾತ್ರಿ 10 ಗಂಟೆಯವರೆಗೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿದರು.

ಸಿದ್ದರಾಮಯ್ಯ ಹಾಗೂ ಡಿಕೆಶಿ ಸೇರಿಕೊಂಡು 120 ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಮ್ಮತದಿಂದ ಆಯ್ಕೆ ಮಾಡಿದ್ದು, ಈ ಪಟ್ಟಿಯನ್ನು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ಅವರು ಹೈಕಮಾಂಡ್​ಗೆ ನೀಡಲಿದ್ದಾರೆ.

ಇನ್ನುಳಿದಂತೆ 104 ಸ್ಥಾನಗಳಿಗೆ ಎರಡರಿಂದ ಮೂರು ಹೆಸರುಗಳು ಪ್ರಸ್ತಾಪವಾಗಿದ್ದು, ಈ ಬಗ್ಗೆ ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಬಳಿಕ ದಿಲ್ಲಿಗೆ ಕೈ ಅಭ್ಯರ್ಥಿಗಳ ಪಟ್ಟಿ ರವಾನೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಕೆಲವು ಭಾಗಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ನಾಯಕರು ಪಕ್ಷಕ್ಕೆ ಸೇರುವ ಸಾಧ್ಯತೆ ಇರುವುದರಿಂದ ನಂತರ ನಿರ್ಧಾರ ತೆಗೆದುಕೊಳ್ಳುವ ತೀರ್ಮಾನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಂತಹ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾರ್ಚ್ 27ರ ನಂತರ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

120 ಕ್ಷೇತ್ರಗಳ ಮೊದಲ ಪಟ್ಟಿಯಲ್ಲಿ ಟಾಪ್ ಲೀಡರ್ಸ್​ ಹೆಸರುಗಳು ಇವೆ ಎಂದು ತಿಳಿದುಬಂದಿದೆ. ಟಾಪ್​ ಲೀಡರ್ಸ್ ಅಂದ್ರೆ ಕೆಲ ಹಾಲಿ ಶಾಸಕರ ಹೆಸರುಗಳು ಮೊದಲ ಪಟ್ಟಿಯಲ್ಲಿವೆ.

ಡಿ.ಕೆ. ಶಿವಕುಮಾರ್, ಕೃಷ್ಣ ಬೈರೇಗೌಡ, ರಾಮಲಿಂಗರೆಡ್ಡಿ, ಹ್ಯಾರಿಸ್, ಆರ್​.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್​, ಜಮೀರ್ ಅಹಮ್ಮದ್​ ಖಾನ್ ಹೀಗೆ ಹಾಲಿ ಹಾಗೂ ಪ್ರಭಾವಿ ನಾಯಕರುಗಳ ಹೆಸರು ಮೊದಲ ಪಟ್ಟಿಯಲ್ಲಿದೆ. ಇನ್ನು ಒಂದು ಕ್ಷೇತ್ರದಲ್ಲಿ ಒಬ್ಬರೇ ಟಿಕೆಟ್​ ಆಕಾಂಕ್ಷಿ ಇರುವ ಅಭ್ಯರ್ಥಿಗಳ ಹೆಸರು ಸಹ ಮೊದಲ ಪಟ್ಟಿಯಲ್ಲೇ ಪ್ರಕಟವಾಗಲಿದೆ ಎನ್ನಲಾಗಿದೆ. ಇದನ್ನು ಹೊರತುಪಡಿಸಿ ಯಾರಿಗೆ ಟಿಕೆಟ್​ ಸಿಗಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಮುಂದೆ ಸರ್ಕಾರ ಬಂದರೆ 4 ರಿಂದ 8 ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಚರ್ಚೆಯಾಗಿದೆ. ಹಾಲಿ ಪರಿಷತ್ ಸದಸ್ಯರಿಗೆ ಟಿಕೆಟ್​ ನೀಡುವ ಬದಲು ಹಿರಿಯ ಹಾಗೂ ಪ್ರಬಲ ಸಮುದಾಯದ ವಿಧಾನ ಪರಿಷತ್ ಸದಸ್ಯರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಮಾತುಕತೆ ಆಗಿದ್ದು, ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ವಿಧಾನ ಪರಿಷತ್ ಸದಸ್ಯರನ್ನು ಸಮರ್ಥವಾಗಿ ಬಳಸಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನವಾಗಿದೆ.

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆಶಿ ಸದ್ಯಕ್ಕೆ ಶೇ.75ರಷ್ಟು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ನಂತರ ಕೇಂದ್ರ ನಾಯಕರಿಗೆ ಪಟ್ಟಿಯನ್ನು ಕಳುಹಿಸಲಾಗುವುದು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ 65 ಸ್ಥಾನಗಳನ್ನು ದಾಟುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

See also  ಬೆಂಗಳೂರು: ಹಿಂದೂ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿದ ಐವರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು