ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾ.25ರಂದು ದಾವಣಗೆರೆಯಲ್ಲಿ ನಡೆಯುವ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ನಾಲ್ಕು ಭಾಗಗಳಲ್ಲಿ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಮಾ.25ಕ್ಕೆ ದಾವಣಗೆರೆಯಲ್ಲಿ ಯಾತ್ರೆ ಸಮಾಪ್ತಿಯಾಗಲಿದೆ.
ಜೆಎಂಐಟಿ ಕಾಲೇಜು ಪಕ್ಕದಲ್ಲಿ ಸಮಾವೇಶಕ್ಕೆ ಭರದ ಸಿದ್ಧತೆ ನಡೆದಿದ್ದು, ಜಾಗ ಸಮತಟ್ಟು ಗೊಳಿಸುವ ಕಾರ್ಯ ನಡೆಯುತ್ತಿದೆ. ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕಕ್ಕೆ ಪ್ರಧಾನಿ ಮೋದಿ ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ.
ಫೆ. 27ರಂದು ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟಿಸಿರುವುದನ್ನು ಸ್ಮರಿಸಬಹುದು. ಅಲ್ಲದೆ ಹುಬ್ಬಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಮಾ.12ರಂದು ಬೆಂಗಳೂರು – ಮೈಸೂರು ಹೆದ್ದಾರಿ ಉದ್ಘಾಟಿಸಿದ್ದರು.