ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಈ ಮೊದಲೇ ನಾನು ಹೇಳಿದ್ದೆ. ಆ ಮಾತು ಈಗ ನಿಜವಾಗಬಹುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ತಿಪಟೂರಿನಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅನಗತ್ಯವಾಗಿ ತಿರುಗಾಡುತ್ತಿದ್ದಾರೆ. ಅಲ್ಲದೆ ಕ್ಷೇತ್ರದ ಕುರಿತು ಅಲ್ಲಿ ಇಲ್ಲಿ ಎಂದು ಕಥೆ ಹೇಳುತ್ತಾರೆ. ಕೋಲಾರ ಮತ್ತೊಂದು ಎಂದು ಆಗಾಗ್ಗೆ ಹೇಳಿಕೆ ನೀಡುತ್ತಿರುತ್ತಾರೆ. ಆ ರೀತಿ ಹೇಳಿಕೆ ನೀಡುವ ಅಗತ್ಯವಿರಲಿಲ್ಲ.
ನನ್ನ ಪ್ರಕಾರ ಅವರು ವರುಣಾದಲ್ಲಿಯೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಎಸ್‌ವೈ ಹೇಳಿದರು.