ರಾಮನಗರ, ಮಾರ್ಚ್ 25: ಅತ್ಯಾಚಾರಕ್ಕೊಳಗಾದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ತಾತಗುಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, 12 ನೇ ತರಗತಿಯಲ್ಲಿ ಓದುತ್ತಿರುವ 17 ವರ್ಷದ ಸಂತ್ರಸ್ತೆಯ ಮೇಲೆ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಲಾಗಿದೆ ಮತ್ತು ತೀವ್ರ ರಕ್ತಸ್ರಾವದಿಂದಾಗಿ ಅವಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಅದೇ ಗ್ರಾಮದವನಾದ ಆರೋಪಿ ಬಾಲಕಿಯನ್ನು ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಗ್ಗಲೀಪುರ ಪೊಲೀಸರು ತನಿಖೆ ಕೈಗೊಂಡಿದ್ದು, ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.