ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಸಂಜೆ ಬಳಿಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಕರಾವಳಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸೆಕೆ ಮುಂದುವರಿಯಲಿದೆ. ಕೆಲವೆಡೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ರಾಜ್ಯದಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಎಂದು ಮುನ್ಸೂಚನೆ ನೀಡಲಾಗಿದೆ. ಎಂದು ಮುನ್ಸೂಚನೆ ನೀಡಲಾಗಿದೆ.