News Karnataka Kannada
Thursday, March 28 2024
Cricket
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಭೀಕರ ಮಳೆ ಅಂಡರ್‌ ಪಾಸ್‌ನಲ್ಲಿ ಸಿಲುಕಿ ಮಹಿಳೆ ಸಾವು

A woman died after getting stuck in an underpass in Bengaluru due to heavy rain
Photo Credit :

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆ ಪರಿಣಾಮ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅಂಡರ್ ಪಾಸ್ ನಲ್ಲಿ ಮುಳುಗಡೆಯಾಗಿದ್ದ ಕಾರಿನಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿತ್ತು, ಘಟನೆಯಲ್ಲಿ ಮಗು ಕಾಣೆಯಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ನಡುವೆ ಅಸ್ವಸ್ಥಗೊಂಡಿದ್ದ ಮಹಿಳೆ ಭಾನುರೇಖಾ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇಂಟ್ ಮಾರ್ಥಾಸ್ ಗೆ ಭೇಟಿ ನೀಡಿದ್ದು, ಮಹಿಳೆ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಮೃತ ಮಹಿಳೆ ಕುಟುಂಬದವರು ಬೆಂಗಳೂರು ನೋಡಲು ವಿಜಯವಾಡದಿಂದ ಆಗಮಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು