ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ಗಂಭೀರ ಗಾಯಗೊಂಡಿರುವ ಹಿಂದೂ ಕಾರ್ಯಕರ್ತರ ಆರೋಗ್ಯವನ್ನು ನಟಿ ಹರ್ಷಿಕಾ ಪೂಣಚ್ಚ ವಿಚಾರಿಸಿದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.
ಬಳಿಕ ಗಾಯಾಳು ಯುವಕರಿಗೆ ಸಾಂತ್ವನ ಹೇಳಿದರು. ಗಭೀರ ಗಾಯಗೊಂಡಿರುವ ಅವಿನಾಶ್ ಹೆತ್ತವರಿಗೂ ಸಾಂತ್ವನ ಹೇಳಿದರು. ಗಾಯಾಳುಗಳು ಶೀಘ್ರ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಈ ವೇಳೆ ನಟಿ ಹರ್ಷಿಕಾ ಪೂನಚ್ಚ ಜೊತೆ ನಿರ್ದೇಶಕ ವಿನು ಬಳಂಜ ಜೊತೆಗಿದ್ದರು
ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ನಟಿ ಹರ್ಷಿಕಾ ಪೂಣಚ್ಚ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.