News Kannada
Saturday, March 02 2024
ಬೆಂಗಳೂರು ನಗರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಹೆಚ್ಡಿಕೆ

Tumakuru: We have to defeat K N Rajanna, says HD Kumaraswamy
Photo Credit : Twitter

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ಬಗ್ಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದು, ಕರಾವಳಿಯಲ್ಲಿ ಶಾಂತಿ ನೆಲಸಲಿ ಎಂಬ ಹ್ಯಾಷ್‌ಟ್ಯಾಗ್‌ನಡಿಯಲ್ಲಿ ಸರಣಿ ಟ್ವೀಟ್‌ ಮಾಡಿದ್ದಾರೆ.

ಟ್ವೀಟ್‌ನಲ್ಲಿ “ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ 3 ಕೊಲೆ! ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಅವರು ಮಂಗಳೂರಿನಲ್ಲಿ ಇದ್ದಾಗಲೇ 3ನೇ ಕೊಲೆ ಆಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗೆಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟಾ? ಎಂದು ಪ್ರಶ್ನೆ ಮಾಡಿದ್ದಾರೆ.

ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಕೊಲೆ!! ಈ ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ & ಕರ್ನಾಟಕವನ್ನು ʼಜಂಗಲ್ ರಾಜ್ʼ ಮಾಡುವ ಹುನ್ನಾರವಷ್ಟೇ ಇದು. ಮನೆ, ಮನಗಳಲ್ಲಿ ಮಾತ್ರ ಇರಬೇಕಿದ್ದ ಧರ್ಮವನ್ನು ʼವ್ಯಸನʼವನ್ನಾಗಿಸಿ ಕೈಗೆ ದೊಣ್ಣೆ, ಶೂಲ ಕೊಟ್ಟು ಯುವಕರ ನಿಷ್ಕಲ್ಮಶ ಮುಗ್ಧಮನಸ್ಸಿಗೆ ʼಕೊಮುಪ್ರಾಷನʼ ಮಾಡಿದ ದುಷ್ಪರಿಣಾಮವೇ ಸರಣಿ ಕೊಲೆಗಳು. ಧರ್ಮನಿರಪೇಕ್ಷತೆ ತತ್ತ್ವವನ್ನು ನಿರ್ನಾಮ ಮಾಡಿದ್ದೇ ಇದಕ್ಕೆಲ್ಲ ಮೂಲ ಕಾರಣ.

ಮಸೂದ್, ಪ್ರವೀಣ್ ನೆಟ್ಟಾರು; ಈಗ ಫಾಸಿಲ್. ಇನ್ನೆಷ್ಟು ಕೊಲೆಗಳು ನಡೆದರೆ ಸರಕಾರಕ್ಕೆ ತೃಪ್ತಿ? ಸರಣಿ ಕೊಲೆಗಳಿಂದ ಕರಾವಳಿಗೆ ಮಾತ್ರವಲ್ಲ, ಕರ್ನಾಟಕದ ಪ್ರತಿಷ್ಠೆಗೆ ಪೆಟ್ಟು ಬಿದ್ದಿದೆ. ಈ ಅರಾಜಕತೆಯಿಂದ ಇಡೀ ಕರಾವಳಿಯ ಆರ್ಥಿಕತೆಯೇ ಬುಡಮೇಲಾಗುತ್ತಿದೆ. ಆದರೆ, ಸರಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ ಎಂದು ಕಿಡಿ ಕಾಡಿದ್ದಾರೆ. ಕರಾವಳಿಯಲ್ಲಿ ನೆಮ್ಮದಿ ನೆಲಸಬೇಕಾದರೆ, ಪೊಲೀಸ್ ವ್ಯವಸ್ಥೆಗೆ ಶಕ್ತಿ ತುಂಬಬೇಕು. ಅಧಿಕಾರಿಗಳು ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು” ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು