News Kannada
Wednesday, February 28 2024
ಬೆಂಗಳೂರು ನಗರ

ಬೆಂಗಳೂರು: ಸ್ಥಾನಮಾನ ನೀಡಿದಕ್ಕೆ ಸಿಎಂಗೆ ಧನ್ಯವಾದ ಸಲ್ಲಿಕೆ

Sahitya Parishat President condoles the death of Shivamogga Subbanna
Photo Credit : By Author

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನವನ್ನು ನೀಡಿರಲಿಲ್ಲ. ಇದೇ ಮೊಟ್ಟಮೊದಲ ಬಾರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದಕ್ಕೆ ಮುಖ್ಯಮಂತ್ರಿಗಳಿಗೆ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಅವರು ಧನ್ಯವಾದ ತಿಳಿಸಿದ್ದಾರೆ.

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೊಂದಿದೆ. ಮೈಸೂರು ಮಹಾರಾಜರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪೋಷಣೆಯೊಂದಿಗೆ ಸ್ಥಾಪಿತವಾದ ಸಮಗ್ರ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು 107 ವರ್ಷಗಳ ಸುದೀರ್ಘ ಹಾಗೂ ಶ್ರೀಮಂತ ಇತಿಹಾಸ ಹೊಂದಿದೆ.

ಎಲ್ಲ ಕನ್ನಡ ಸಂಘ-ಸಂಸ್ಥೆಗಳ ಮಾತೃ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಅನೇಕ ಪ್ರಾಥಃಸ್ಮರಣೀಯರು ಅಧ್ಯಕ್ಷರಾಗಿ ಕನ್ನಡ ಕಟ್ಟುವಲ್ಲಿ, ಬೆಳೆಸುವಲ್ಲಿ ಅಪಾರ ಶ್ರಮವಹಿಸಿದ್ದಾರೆ. ಕನ್ನಡ ಸಾಂಸ್ಕೃತಿಕ ರಾಯಭಾರಿಗಳಾಗಿ ನಾಡಿನುದ್ದಗಲಕ್ಕೂ ಕನ್ನಡ ಪ್ರೇಮವನ್ನು ಹೆಚ್ಚಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಅತ್ಯಂತ ಕ್ರಿಯಾಶೀಲತೆಯಿಂದ ಕನ್ನಡಪರ ಕಾರ್ಯಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ-ಗರಿಮೆ, ಇತಿಹಾಸವನ್ನು ಮನಗಂಡು, ನಾಡು-ನುಡಿಗೆ ಪರಿಷತ್ತು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಪರಿಗಣಿಸಿ ಹಾಗೂ ಪರಿಷತ್ತಿನ ಚುನಾವಣೆ ಇತಿಹಾಸದಲ್ಲಿ ದಾಖಲೆಯನ್ನು ಸೃಷ್ಟಿಸಿದ ಮತ್ತು ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡು, ಅನೇಕ ಕ್ರಾಂತಿಕಾರಿ ಬದಲಾವಣೆಯ ಮುಖೇನ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಕಾರ್ಯವೈಖರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನವನ್ನು ನೀಡಿ ಗೌರವಿಸಿರುವುದು ಅತ್ಯಂತ ಸಂತಸದಾಯಕ ವಿಷಯವಾಗಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು