News Kannada
Monday, February 26 2024
ಬೆಂಗಳೂರು ನಗರ

ಬೆಂಗಳೂರು: ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ- ಜೆ.ಸಿ. ಮಾಧುಸ್ವಾಮಿ

Bengaluru: The government is committed to protecting the interests of students, says J.C. Madhuswamy
Photo Credit : By Author

ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಕರ್ನಾಟಕ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್. ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂ ಕೋರ್ಟ್ ಮುಂದೆ ಅಪೀಲು ಇದ್ದು, ವಕೀಲರನ್ನು ನೇಮಿಸಲಾಗಿದೆ ಎಂದರು.

2023-24ನೇ ಶೈಕ್ಷಣಿಕ ವರ್ಷದಿಂದ ಅಖಿಲ ಭಾರತ ಕೋಟಾದಡಿಯ ಆಧಾರದ ಮೇಲೆ ಅರ್ಹರಾಗುವ ರಾಜ್ಯದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಶೇ.25 ರಷ್ಟು ರಾಜ್ಯದ ನಿವಾಸಿ ಮೀಸಲಾತಿಯನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲಿಡುವುದನ್ನು ತಪ್ಪದೇ ಜಾರಿಗೊಳಿಸುವಂತೆ ತಿಳಿಸಿ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಉಪಕುಲಪತಿಗಳಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು