News Kannada
Friday, February 23 2024
ಬೆಂಗಳೂರು ನಗರ

ಬೆಂಗಳೂರು: ಜೈಲಿನಲ್ಲಿರುವ ಕೈದಿಗಳ ಕೂಲಿ ಹೆಚ್ಚಿಸುವ ಆದೇಶ ಇನ್ನೂ ಜಾರಿಯಾಗಿಲ್ಲ ಎಂದ ಗೃಹ ಸಚಿವರು

As a move to increase the quantum of punishment for the offenders, a university of forensic sciences has been set up. 
Photo Credit : Twitter

ಬೆಂಗಳೂರು: ಜೈಲಿನಲ್ಲಿರುವ ಕೈದಿಗಳಿಗೆ ದಿನಗೂಲಿ ಏರಿಕೆ ಮಾಡಿದ್ದಾರೆ ಎಂಬ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ, ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಕೈದಿಗಳ ದಿನಗೂಲಿಯನ್ನ 525 ರೂ.ಗಳಿಗೆ ಏರಿಸಿದ್ದು ಬೇರೆ ಉದ್ಯೋಗಗಳಿಗಿಂತ ಜೈಲುವಾಸವೇ ಲಾಭದಾಯಕ ಎಂಬಂತೆ ಹಲವರು ಗೇಲಿ ಮಾಡಿ ಹರಿಬಿಟ್ಟಿರುವುದು ಕಂಡುಬಂದಿದೆ.

ಈ  ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ ನೀಡಿದ್ದು, ರಾಜ್ಯದಲ್ಲಿ ಸುಮಾರು ಹದಿನೈದು ಸಾವಿರ ಕೈದಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. ಜೈಲುವಾಸದಲ್ಲಿರುವ ಕೈದಿಗಳಿಗೆ ಕೂಲಿ ಹಣವನ್ನು 200 ರೂ.ಗಳಿಂದ ಸ್ವಲ್ಪ ಹೆಚ್ಚಿಗೆ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತೂ ಅಂತಹ ಆದೇಶ ಇದುವರೆಗೂ ಹೊರಡಿಸಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಜೈಲು ಶಿಕ್ಷೆಯಲ್ಲಿರುವ ಹಲವು ಕೈದಿಗಳಿಂದ ಪ್ರತಿದಿನ ಕೆಲಸಕಾರ್ಯಗಳನ್ನು, ದುಡಿಮೆ ಮಾಡಿಸಲಾಗುತ್ತಿದ್ದು, ಪ್ರತಿಯೊಬ್ಬ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆ ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ.

ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಆದರೆ, ಶಿಕ್ಷೆಯಲ್ಲಿರುವ ಕೈದಿಗಳಿಗೆ ಈಗಲೂ ಕೊಡುತ್ತಿರುವುದು ದಿನಕ್ಕೆ 200 ರೂ.ಗಳು. ಅದರಲ್ಲಿ ಊಟದ ಖರ್ಚು 100 ರೂ.ಗಳನ್ನು ಸಹಾ ಕಳೆಯಲಾಗುತ್ತಿದೆ. ಕೈದಿಯಾದ ಮಾತ್ರಕ್ಕೆ ಆತನಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರ್ಕಾರಕ್ಕೂ ಇಲ್ಲ. ಈ ಕಾರಣದಿಂದ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ ಅಷ್ಟೇ. ಕೈದಿಗಳ ಕೂಲಿ ಹೆಚ್ಚಿಸುವ ಆದೇಶ ಇನ್ನೂ ಜಾರಿಯಾಗಿಲ್ಲ. ಆದರೆ, ಹಲವರು ಕೈದಿಗಳ ಸಂಬಳ ಶಿಕ್ಷಕರ ವೃತ್ತಿಗಿಂತಲೂ ಲೇಸು ಎಂದು ಎಲ್ಲೆಡೆ ಸುದ್ದಿ ಹರಡುತ್ತಿರುವುದು ತಿಳಿದು ಬಂದಿದೆ. ಹಾಗಾಗಿ ಈ ಬಗ್ಗೆ ಮೇಲಿನ ಸ್ಪಷ್ಟೀಕರಣ ನೀಡಿದ್ದೇನೆ ಎಂದು ಗೃಹ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು