News Kannada
Monday, March 04 2024
ಬೆಂಗಳೂರು ನಗರ

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ಪತ್ರಕರ್ತೆ ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ಬೆಂಗಳೂರು: ಗ್ಯಾಸ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ಪತ್ರಕರ್ತೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಮಹಿಳೆ ಸಿ.ಆರ್.ಲತಾ (46) ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಗ್ಯಾಸ್ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕೆಳಗೆ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ಹೋಗಿದೆ. ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.

ಹೆಬ್ಬಾಳ ಮೇಲ್ಸೇತುವೆ ಬಳಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆ ಲತಾ ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಲಾರಿ ಚಾಲಕನನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು