ಬೆಂಗಳೂರು: ಬಿಜೆಪಿ ಕೇಂದ್ರ ನಾಯಕರ ತಪ್ಪು ನಿರ್ಧಾರದಿಂದ ಬಿಜೆಪಿಗೆ ಸೋಲಾಗಿದೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಹಿರೇಕಲ್ಮಠದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ ರಾಜ್ಯಕ್ಕಲ್ಲ. ಬೆಲೆ ಏರಿಕೆ ಸಂದರ್ಭದಲ್ಲಿ ಅಕ್ಕಿ ಕಡಿತ ಮಾಡಿದ್ದು ತಪ್ಪು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಕೆಲಸ ಮಾಡಿದೆ ಎಂದಿದ್ದಾರೆ. ಒಳಮೀಸಲಾತಿಯಿಂದಲೇ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ ಎಂದು ಹೇಳಿದ್ದಾರೆ.
ಕೇಂದ್ರ ನಾಯಕರ ತಪ್ಪು ನಿರ್ಧಾರದಿಂದ ಬಿಜೆಪಿಗೆ ಸೊಲು: ರೇಣುಕಾಚಾರ್ಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.