ಬೆಂಗಳೂರು : ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧವನ್ನು ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದಾರೆ. ಭ್ರಷ್ಟ ಬಿಜೆಪಿ ಸರಕಾರದಿಂದ ವಿಧಾನ ಸೌಧ ಅಪವಿತ್ರವಾಗಿತ್ತು. ಹೀಗಾಗಿ ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕಳೆದ ಜನವರಿಯಲಿ ವಿಧಾನ ಸೌಧವನ್ನು ಗೋಮೂತ್ರದಿಂದ ಶುದ್ಧೀಕರಿಸಬೇಕು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಗೋಮೂತ್ರ ಸಿಂಪಡಿಸಿದ್ದಾರೆ.
ಬೆಂಗಳೂರು :ವಿಧಾನಸೌಧವನ್ನು ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ ಕಾಂಗ್ರೆಸ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.