ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲಾ ಕಾಮಗಾರಿಗಳಿಗೆ ತಡೆ ನೀಡಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಮಾರ್ಚ್ 22ರ ಸೋಮವಾರ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ (ಆ ಮತ್ತು ಸಂ) ಡಾ. ಏಕ್ರೂಪ್ ಕೌರ್ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳ ಟಿಪ್ಪಣಿ ಅನ್ವಯ ಸುತ್ತೋಲೆ ಪ್ರಕಟವಾಗಿದೆ.
ಸುತ್ತೋಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ ಮಂಡಳಿ/ ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ ಎಂದು ಹೇಳಿದೆ.