ಬೆಂಗಳೂರು: ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ ಅವರಿಗೆ 91ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ, ಸಚಿವರಾಗಿ, ಶಾಸಕನಾಗಿ, ಸಂಸದನಾಗಿ ಅವರು ಮಾಡಿರುವ ಸೇವೆ ಅಸಂಖ್ಯಾತ. ಕೆಂಪುಕೋಟೆಯಲ್ಲಿ ಪ್ರಧಾನಿಯಾಗಿ ರಾಷ್ಟ್ರಧ್ವಜ ಹಾರಿಸಿದ ಮೊದಲ ಮತ್ತು ಸದ್ಯದ ಏಕೈಕ ಕನ್ನಡಿಗ ಎಚ್. ಡಿ ದೇವೇಗೌಡ. ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಪುತ್ರ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಸ್ಸು ಮತ್ತು ಆರೋಗ್ಯ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
Greetings to our former PM Shri @H_D_Devegowda Ji on his birthday. His contribution towards our nation is noteworthy. Praying for his long and healthy life.
— Narendra Modi (@narendramodi) May 18, 2023