ಬೆಂಗಳೂರು: ಸಾಮಾಜಿಕ ಮಾಧ್ಯಮ ಬಳಕೆಗೂ ವಯೋಮಿತಿಯನ್ನು ಜಾರಿಗೆ ತಂದರೆ ಸೂಕ್ತ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.
ಶಾಲೆಗೆ ಹೋಗುವ ಮಕ್ಕಳೂ ಸಹ ಸಾಮಾಜಿಕ ಜಾಲತಾಣಗಳಿಗೆ ದಾಸರಾಗಿರುವ ಕಾರಣ ಮತದಾನಕ್ಕೆ 21 ವರ್ಷ ನಿಗದಿ ಮಾಡಿರುವ ಮಾದರಿಯಲ್ಲೇ ಸಾಮಾಜಿಕ ಜಾಲತಾಣ ಬಳಕೆಗೂ ವಯೋಮಿತಿ ನಿಗದಿ ಮಾಡುವುದು ಸೂಕ್ತ. ಈ ಬಗ್ಗೆ ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೆ.19 ರಂದು ಮೌಖಿಕವಾಗಿ ಸಲಹೆ ನೀಡಿದೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ ಆದೇಶಗಳ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದ ಜೂನ್ 30ರ ಏಕ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ (ಟ್ವಿಟರ್) ಸಲ್ಲಿಸಿದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಜಿ ನರೇಂದರ್ ಹಾಗು ವಿಜಯಕುಮಾರ್ ಎ ಪಾಟೀಲ್ ಅವರ ವಿಭಾಗೀಯ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಇದರ ಜತೆ ಮಕ್ಕಳಿಗೆ 17 ಅಥವಾ 18 ವರ್ಷ ಇರಬಹುದು. ಆದರೆ ರಾಷ್ಟ್ರದ ಹಿತಾಸಕ್ತಿ ಯಾವುದು ಅಥವಾ ಯಾವುದು ಅಲ್ಲ ಎಂಬುದನ್ನು ನಿರ್ಣಯಿಸುವ ಪ್ರಬುದ್ಧತೆ ಅವರಿಗೆ ಇದೆಯೇ? ಎಂದು ಪ್ರಶ್ನಿಸಿದರು.
ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರವಲ್ಲ, ಇಂಟರ್ನೆಟ್‌ನಲ್ಲಿನ ವಿಷಯಗಳನ್ನು ತೆಗೆದುಹಾಕಬೇಕು. ಮನಸ್ಸನ್ನು ಭ್ರಷ್ಟಗೊಳಿಸುತ್ತದೆ, ಸಾಮಾಜಿಕ ಮಾಧ್ಯಮಗಳ ಬಳಕೆಗೆ ವಯಸ್ಸಿನ ಮಿತಿಯನ್ನು ತರುವುದನ್ನು ಸರ್ಕಾರ ಪರಿಗಣಿಸಬೇಕು ಎಂದಿದ್ದಾರೆ.