ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಮ್ಮ ಸರ್ಕಾರದಲ್ಲಿ ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉನ್ನತ ಪೊಲೀಸ್ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕುತ್ತೀರಿ ಅಂದರೆ ಹೇಗೆ? ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡ ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ ಎಂದರು.
ಪಿಎಸ್ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ತಿಳಿಯುತ್ತದೆ. ಪೊಲೀಸ್ ಇಲಾಖೆ ಘನತೆಯನ್ನು ನೀವು ಹಾಳು ಮಾಡಿದ್ದೀರಿ. ಇದನ್ನು ನಾವು ಸಹಿಸುವುದಿಲ್ಲ ಎಂದರು.
ಪೊಲೀಸರೇ ಕೇಸರಿ ಶಾಲು ಹಾಕುತ್ತೀರಿ ಅಂದರೆ ಹೇಗೆ: ಉಪಮುಖ್ಯಮಂತ್ರಿ ಶಿವಕುಮಾರ್ ಪ್ರಶ್ನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.