News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಜಯನಗರ ವಿಧಾನಸಭಾ ಕ್ಷೇತ್ರ ಫಲಿತಾಂಶ: ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿಗೆ ಆಘಾತ

Jayanagar Assembly Constituency Results 2019: Congress candidate Sowmya Reddy shocked
Photo Credit : News Kannada

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ಅಳೆದೂ ಸುರಿದು ಕೇಂದ್ರ ಚುನಾವಣಾ ಆಯೋಗ ಅಂತಿಮವಾಗಿ ಪ್ರಕಟಿಸಿದೆ. ನಾಲ್ಕು ಬಾರಿ ಮತ್ತೆ ಮತ್ತೆ ಎಣಿಸಿದರೂ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ನಿಚ್ಚಳ ಗೆಲುವು ಎಂದು ಚುನಾವಣಾ ಆಯೋಗ ಸಾರಿದೆ.

ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮೂರ್ತಿಗೆ 57,797 ಮತಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿಗೆ 57,781 ಮತಗಳು ಎಂದು ಚುನಾವಣಾಧಿಕಾರಿಗಳಿಂದ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ‘ಕೈ’ ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಯಿತಲ್ಲ ಎಂದು ಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ನಡುರಾತ್ರಿ ಕಣ್ಣೀರು ಹಾಕಿದ್ದಾರೆ.

ಮೊದಲ ಸುತ್ತಿನಲ್ಲಿ 116 ಮತಗಳಿಂದ ಗೆದ್ದುಬೀಗಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಆ ನಂತರ ಮರು ಮರು ಎಣಿಕೆಯಾದಾಗ ಫಲಿತಾಂಶ ಕಾಂಗ್ರೆಸ್​ನ ‘ಕೈ’ ಚೆಲ್ಲಿತ್ತು. ವಿಜಯ ಲಕ್ಷ್ಮಿ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರ ಕೊರಳಿಗೆ ಜಯದ ಹಾರ ಹಾಕಿದ್ದಳು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು