News Karnataka Kannada
Friday, April 26 2024
ಸಂಪಾದಕರ ಆಯ್ಕೆ

ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಸ್ಟಾಲಿನ್

Airstrip to promote tourism: CM announces in budget
Photo Credit : Facebook

ಬೆಂಗಳೂರು: ಕಾಂಗ್ರೆಸ್ ಕೊನೆಗೂ ಸರ್ಕಾರ ರಚಿಸಲು ಮುಂದಾಗಿದೆ ಕಾಂಗ್ರೆಸ್ ಹೈಕಮಾಂಡ್ ಸಂಧಾನದ ಮೂಲಕ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಘೋಷಿಸಿದೆ.

ಇದೇ ಶನಿವಾರ, ಮೇ 20ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸಮಾರಂಭಕ್ಕೆ ಗಣ್ಯರ ಹಾಜರಿ ಶನಿವಾರ, ಮೇ 20ರಂದು ನಡೆಯುವ ಪ್ರಮಾಣ ವಚನ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಆಗಮಿಸಲಿದ್ದಾರೆ.

ಇನ್ನು ಕರ್ನಾಟಕ ನೂತನ ಸಿಎಂ ಹಾಗೂ ಡಿಸಿಎಂ ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ಸೇತರ ನಾಯಕರೂ ಭಾಗವಹಿಸಲಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಹಾಜರಾಗುವ ನಿರೀಕ್ಷೆ ಇದೆ. ಇವರಿಗೆ ಖುದ್ದು ಮಲ್ಲಿಕಾರ್ಜುನ ಖರ್ಗೆಯೇ ಆಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಸೇರಿದಂತೆ ಹಲವು ನಾಯಕರು ಪ್ರಮಾಣ ವಚನ ಸಮಾರಂಭಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಹೆಚ್ಚಳವಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಕಗ್ಗಂಟಾಗಿದ್ದ ಕರ್ನಾಟಕ ಸಿಎಂ ಆಯ್ಕೆ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಇವರುಗಳ ಮಧ್ಯಸ್ಥಿಕೆಯಲ್ಲಿ ಬಗೆಹರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು