News Kannada
Thursday, February 22 2024
ಬೆಂಗಳೂರು ನಗರ

ಹಿಂಸಾಚಾರಕ್ಕೆ ವಿಪಕ್ಷಗಳು ತುಪ್ಪ ಸುರಿಯುವ ಕೆಲಸ ಮಾಡುತ್ತಿವೆ: ಆರಗ ಜ್ಞಾನೇಂದ್ರ

Photo Credit : Twitter

ಮದ್ದೂರು : ಕೇಂದ್ರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಹಿಂಸಾಚಾರಕ್ಕೆ ವಿರೋಧ ಪಕ್ಷಗಳು ತುಪ್ಪ ಸುರಿಯುವ ಕೆಲಸ ಮಾಡುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗಂಭೀರ ಆರೋಪ ಮಾಡಿದರು.

ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ತಾಲೂಕಿನ ಸೋಮನಹಳ್ಳಿ ಸಮೀಪ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಹಾಗೂ ಬಿಜೆಪಿ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ದೇಶದ ರಕ್ಷಣೆ ಹಾಗೂ ಯುವಕರಿಗೆ ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ಪ್ರಧಾನಿ ನರೇಂದ್ರಮೋದಿ ಅಗ್ನಿಪಥ್ ಯೋಜನೆ ಜಾರಿಗೆ ತಂದಿದ್ದಾರೆ. ಯೋಜನೆ ಅನುಷ್ಠಾನಕ್ಕೂ ಮುನ್ನ ಕಳೆದ ಎರಡು ವರ್ಷಗಳ ಕಾಲ ಮಾಜಿ ಸೈನಿಕರೊಂದಿಗೆ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸುವ ಮೂಲಕ ಒಮ್ಮತದೊಂದಿಗೆ ಈ ಯೋಜನೆ ಜಾರಿಗೊಳಿಸಿದ್ದಾರೆ.

ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕಾಗಿ ಅಗ್ನಿಪಥ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಅಪಪ್ರಚಾರ ನಡೆಸುವ ಮೂಲಕ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿವೆ ಎಂದು ಕಿಡಿಕಾರಿದರು.

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ನಡೆದ ಚುನಾವಣೆಗೆ ಕಾಂಗ್ರೆಸ್ ಗೆಲುವು ಮುಂದಿನ ವಿಧಾನ ಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಚುನಾವಣೆ ಎಂದ ಮೇಲೆ ಸೋಲು-ಗೆಲುವು ಸಹಜವಾಗಿರುತ್ತದೆ. ಸೋಲನ್ನು ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು