ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ದಿನೇ ದಿನೇ ಹೆಚ್ಚುತ್ತಿದೆ. ನಾಳೆ ಸೆ.29ರಂದು ರಾಜ್ಯವ್ಯಾಪಿ ಬಂದ್ ಗೆ ಕರೆ ನೀಡಲಾಗಿದೆ. . ಈ ವೇಳೆ ಪ್ರತಿಭಟನೆಯಲ್ಲಿ ನಟ ಶಿವರಾಜ್ಕುಮಾರ್ ಭಾಗಿಯಾಗುತ್ತಾರೆ ಎಂದು ಬೆಂಗಳೂರಿನಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಹೇಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಶಿವಾನಂದ ಸರ್ಕಲ್‌ನ ಗುರುರಾಜ ಕಲ್ಯಾಣ ಮಂಟಪದ ಬಳಿ ನಡೆಯುವ ಪ್ರತಿಭಟನೆಯಲ್ಲಿ ನಟ ಶಿವಣ್ಣ ಭಾಗಿಯಾಗುತ್ತಾರೆ. ಚಿತ್ರರಂಗದ ಹಲವು ನಟರು ಬಂದ್ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ. ನಟ ಶಿವರಾಜ್ಕುಮಾರ್ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದರು. ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲ ಚಿತ್ರೋದ್ಯಮ ಚಟುವಟಿಕೆಗಳು ಬಂದ್ ಮೂಲಕ ಕಾವೇರಿ ನೀರಿನ ವಿಚಾರದಲ್ಲಿ ಹೋರಾಟಕ್ಕೆ ಇಳಿದಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಟ ಶಿವರಾಜ್ ಕುಮಾರ್ ಅವರ ಮನೆಗೆ ಆಗಮಿಸಿ ಹೋರಾಟದ ಮುಂದಾಳತ್ವ ವಹಿಸುವಂತೆ ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಾಳೆ ಪ್ರತಿಭಟನೆ

Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.