ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ಮರುತನಿಖೆ ಮಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಕೇಳಿಬಂದಿದ್ದ ಪಿಎಸ್ಐ ಹಗರಣ, ಗುತ್ತಿಗೆದಾರರ ಮೇಲೆ ಲಂಚದ ಒತ್ತಡ ಮುಂತಾದ ಹಲವಾರು ಆರೋಪಗಳನ್ನು ಮರುತನಿಖೆ ಮಾಡಲಾಗುವುದು ಎಂದು ಹೇಳಿದರು.
ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಹಳೆಯ ಪ್ರಕರಣ ತನಿಖೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು, ಇದರಂತೆ ಬಿಜೆಪಿ ಸರ್ಕಾರದ ಎಲ್ಲ ಹಗರಣಗಳನ್ನು ಮರುತನಿಖೆ ನಡೆಸಲಾಗುವುದು ಎಂದರು.