News Kannada
Monday, March 04 2024
ಬೆಂಗಳೂರು ನಗರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ

Heavy rain warning issued for 10 districts
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳ ಜನರಲ್ಲಿ ಮಳೆ ಆತಂಕ ಎದುರಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 29, 30 ರಂದು ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಮತರ, ತುಮಕೂರು, ಚಾಮರಾಜನಗರ, ಕಲಬುರಗಿ, ಬಳ್ಳಾರಿ, ಬೀದರ್ ಜಿಲ್ಲೆಗಳು ಮತ್ತು ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು