News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ದೇವರ ಹೆಸರನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

Siddaramaiah takes oath in god's name
Photo Credit : News Kannada

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿಗೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ನೂತನ ಸಿಎಂ ಮತ್ತು ಡಿಸಿಎಂಗೆ ರಾಜ್ಯಪಾಲ ಠಾವರ್‌ಚಂದ ಗೆಹ್ಲೋತ್‌ ಪ್ರತಿಜ್ಞಾವಿಧಿ ಬೋಧಿಸಿದರು. ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಮತ್ತು ಡಿ.ಕೆ.ಶಿವಕುಮಾರ್‌  ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಮಾಡಿದರು.

ನೂತನ ಸಚಿವರು
ಡಾ.ಜಿ. ಪರಮೇಶ್ವರ್‌ ಅವರು ಸಂವಿಧಾನದ ಹೆಸರಿನಲ್ಲಿ, ಕೆ.ಎಚ್‌. ಮುನಿಯಪ್ಪ , ಕೆ.ಜೆ. ಜಾರ್ಜ್‌ ಅವರು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು. ಎಂ.ಬಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಪ್ರಿಯಾಂಕಾ ಖರ್ಗೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್​ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್​, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋತ್‌, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಜಮ್ಮುಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ, ಪುದುಚೇರಿ ಮಾಜಿ ಸಿಎಂ ನಾರಾಯಣ ಸ್ವಾಮಿ, ಅಖಿಲೇಶ್‌ ಯಾದವ್‌, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಜಾರ್ಖಂಡ್‌ ಸಿಎಂ ಹೇಮಂತ್‌ ಸೂರೇನ್‌, ಫಾರೂಕ್‌ ಅಬ್ದುಲ್ಲಾ, ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್‌ ಮತ್ತಿತರರು ಉಪಸ್ಥಿತರಿದ್ದರು.

ತಾರಾ ಮೆರುಗು
ಕಾರ್ಯಕ್ರಮದಲ್ಲಿ ನಟರಾದ ಕಮಲ್​ ಹಾಸನ್​, ಶಿವರಾಜ್‌ ಕುಮಾರ್‌, ದುನಿಯಾ ವಿಜಯ್‌, ನಟಿಯರಾದ ಉಮಾಶ್ರೀ, ರಮ್ಯಾ, ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ಸೇರಿದಂತೆ ಹಲವಾರು ಮಂದಿ ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು