News Kannada
Saturday, March 02 2024
ಬೆಂಗಳೂರು ನಗರ

ಸರ್ವರಿಗೂ ಸಮಪಾಲು ಎಂದು ಟ್ವೀಟ್‌ ಮಾಡಿ ಡಿಸಿಎಂಗೆ ಟಾಂಗ್‌ ಕೊಟ್ಟ ಸಿಎಂ

The CM gave a tong to the DCM by tweeting that everyone has an equal share
Photo Credit : News Kannada

ಬೆಂಗಳೂರು: ಜಾತಿಗಣತಿ ವರದಿ ವಿಚಾರದಲ್ಲಿ ಸಿಎಂ ಡಿಸಿಎಂ ನಡುವೆ ಜಿದ್ದಾಜಿದ್ದಿನ ಆಂತರಿಕ ಕಲಹ ನಡೆಯುತ್ತಿದೆ. ಜಾತಿ ಗಣತಿ ವರದಿ ಬಿಡುಗಡೆಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಹೇಳಿಕೆಯನ್ನು ಮುಂದಿಟ್ಟುಕೊಂಡು ಟ್ವೀಟ್ ಮಾಡಿದ್ದಾರೆ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಡುವ ಮೊದಲ ಕೆಲಸ ಜಾತಿ ಗಣತಿ ಪ್ರಕ್ರಿಯೆಗೆ ಚಾಲನೆ ನೀಡುವುದು. ಜಾತಿಗಣತಿ ನಡೆಸಿದಾಗಲೇ ಭಾರತ ಮಾತೆಗೆ ಜಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯ ಪೋಸ್ಟರ್ ಅನ್ನು ಟ್ವೀಟ್ ಮೂಲಕ ಹಂಚಿಕೊಂಡ ಸಿದ್ದರಾಮಯ್ಯ, ಅವರು, “ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ “ಸರ್ವರಿಗೂ ಸಮಪಾಲು – ಸರ್ವರಿಗೂ ಸಮಬಾಳು” ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ” ಎಂದಿದ್ದಾರೆ.
ಅಲ್ಲದೆ, “ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ” ಎಂದು ಸಿದ್ದರಾಮಯ್ಯ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು