News Karnataka Kannada
Thursday, March 28 2024
Cricket
ಬೆಂಗಳೂರು ನಗರ

ತುಮಕೂರು: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Applications invited for one post of District Planning Assistant
Photo Credit : News Kannada

ತುಮಕೂರು: ರಾಜ್ಯ ವಲಯ,ಜಿಲ್ಲಾ ವಲಯ ಯೋಜನೆಗಳಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ವಿತರಣೆ, ಸಹಾಯಧನಕ್ಕಾಗಿ ಆಸಕ್ತ ವ್ಯಕ್ತಿ, ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯ ವಲಯ ಯೋಜನೆಯಡಿ ಕೆರೆ, ಜಲಾಶಯಗಳ ಅಂಚಿನಲ್ಲಿ ನಿರ್ಮಿಸಿರುವ ಮೀನುಮರಿ ಪಾಲನಾ ಕೊಳಗಳಲ್ಲಿ ಮೀನುಮರಿಗಳನ್ನು ಪಾಲನೆ ಮಾಡಲು ಸಹಾಯಧನ, ಮೀನುಮರಿ ಖರೀದಿಗೆ ಸಹಾಯಧನ, ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಖರೀದಿ,ವಿತರಣೆ ಯೋಜನೆ, ಜಿಲ್ಲಾ ವಲಯ ವಿಶೇ? ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಖರೀದಿ,ವಿತರಣೆ, ಜಿಲ್ಲಾ ವಲಯ ಮೀನು ಮಾರುಕಟ್ಟೆ ಮತ್ತು ಮತ್ಸ್ಯವಾಹಿನಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವ್ಯಕ್ತಿ,ಸಂಘ, ಸಂಸ್ಥೆಗಳು ಮೇಲ್ಕಂಡ ಕಾರ್ಯಕ್ರಮಗಳಡಿ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಪಡೆದು ಅಗತ್ಯವಿರುವ ಎಲ್ಲಾ ದಾಖಲಾತಿಗಳೊಂದಿಗೆ ಜೂನ್ ೩೦ರೊಳಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಕಚೇರಿಗಳಲ್ಲೇ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯವಾಣಿ ಸಂಖ್ಯೆ: 8277200300 ಅಥವಾ ಮೀನುಗಾರಿಕೆ ಅಧಿಕಾರಿಗಳು ಗುಬ್ಬಿ- 7349050051, ಪಾವಗಡ, ಕೊರಟಗೆರೆ, ಮಧುಗಿರಿ – 7406092921, ಚಿಕ್ಕನಾಯಕನಹಳ್ಳಿ -9686726779, ತಿಪಟೂರು, ಕುಣಿಗಲ್ – 9740900866, ತುರುವೇಕೆರೆ, ಶಿರಾ – 9620512914ನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು