News Kannada
Monday, March 04 2024
ಬೆಂಗಳೂರು ನಗರ

14 ದಿನಗಳ ಸುದೀರ್ಘ ನಿದ್ದೆಯಿಂದ ಏಳದ ವಿಕ್ರಮ್‌ ಲ್ಯಾಂಡರ್‌

Vikram lander fails to wake up after 14 days of long sleep
Photo Credit : News Kannada

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 3ರ 14 ದಿನಗಳ ಯಶಸ್ವಿ ಕಾರ್ಯಾಚರಣೆ ಬಳಿಕ 14 ದಿನಗಳ ಸುದೀರ್ಘ ನಿದ್ರೆಗೆ ಜಾರಿದ್ದ ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್ ಗಳನ್ನು ಎಬ್ಬಿಸುವ ಮೊದಲ ಪ್ರಯತ್ನ ವಿಫಲವಾಗಿದೆ.

ಶುಕ್ರವಾರ ಚಂದ್ರನ ಮೇಲಿರುವ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಗೆ ಬೆಂಗಳೂರಿನ ಇಸ್ರೋ ನಿಯಂತ್ರಣ ಕೇಂದ್ರದಿಂದ ವಿಜ್ಞಾನಿಗಳು ಸಂದೇಶ ರವಾನಿಸಿದ್ದು, ಈ ಸಂದೇಶಕ್ಕೆ ಲ್ಯಾಂಡರ್ ಮತ್ತು ರೋವರ್ ನಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದುಬಂದಿದೆ. ಚಂದ್ರನ ಮೇಲೆ ಇಳಿದಿರುವ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್‌ ರೋವರ್ ಜತೆಗಿನ ಸಂಪರ್ಕ ಮರುಸ್ಥಾಪಿಸಲು ಇಸ್ರೋ ಶುಕ್ರವಾರ ಪ್ರಯತ್ನಿಸಿತು. ಇದು ಫಲಕೊಟ್ಟಿಲ್ಲ. ಆದರೂ, ಸಂರ್ಪಕ ಸಾಧನೆಯ ಪ್ರಯತ್ನ ಮುಂದುವರಿದಿದೆ.

ಚಂದ್ರಯಾನ 3ರ ಲ್ಯಾಂಡರ್ ಮತ್ತು ರೋವರ್ ಅನ್ನು ಪುನಃ ಸಕ್ರಿಯಗೊಳಿಸುವ ಪ್ರಯತ್ನಕ್ಕೆ ಶುಕ್ರವಾರ (ಸೆ.22) ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಆದಾಗ್ಯೂ, ಪ್ರಯತ್ನ ಮುಂದುವರಿದಿದೆ. ಚಂದ್ರಯಾನ 3ರ ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಜ್ಞಾನ್ ಜತೆಗೆ ಸಂಪರ್ಕ ಸಾಧಿಸುವ ಕೆಲಸ ಪ್ರಗತಿಯಲ್ಲಿದೆ ಎಂದು ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ.

ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್‌ನ ಎಚ್ಚರ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಸಂಪರ್ಕ ಸಾಧಿಸುವ ಪ್ರಯತ್ನಗಳನ್ನು ಮಾಡಲಾಗಿದೆ. ಸದ್ಯಕ್ಕೆ ಅವುಗಳಿಂದ ಯಾವುದೇ ಸಿಗ್ನಲ್‌ಗಳು ಬಂದಿಲ್ಲ. ಸಂಪರ್ಕವನ್ನು ಸ್ಥಾಪಿಸುವ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಟ್ವಿಟರ್ ನಲ್ಲಿ ಇಸ್ರೋ ಹೇಳಿಕೊಂಡಿದೆ.

ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಜ್ಞಾನ್ ಎರಡನ್ನೂ ಸೆಪ್ಟೆಂಬರ್ 2 ರಂದು “ಸುರಕ್ಷಿತವಾಗಿ ನಿಲ್ಲಿಸಲಾಯಿತು” ಮತ್ತು ಚಂದ್ರನ ರಾತ್ರಿ ಪ್ರಾರಂಭವಾದ ನಂತರ ಸ್ಲೀಪ್ ಮೋಡ್‌ನಲ್ಲಿ ಇರಿಸಲಾಗಿತ್ತು. ಚಂದ್ರನ ಮೇಲೆ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮನಾಗಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು