ಬೆಂಗಳೂರು: ಕಾಂಗ್ರೆಸ್ಗೆ ಬಹುಮತ ದೊರೆಯುವುದು ಖಚಿತ ಈ ನಿಟ್ಟಿನಲ್ಲಿ ಸರ್ಕಾರ ರಚಿಸಲು ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಲವು ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂಬ ಹೇಳಿಕೆ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಚುನಾವಣೋತ್ತರ ಸಮೀಕ್ಷೆಗಳಲ್ಲಿ ತೋರಿಸಿರುವ ಅಂಕಿಅಂಶಗಳನ್ನು ನಾನು ನಂಬುವುದಿಲ್ಲ. ಕಾಂಗ್ರೆಸ್ 146 ಸ್ಥಾನಗಳನ್ನು ಗೆಲ್ಲಲಿದೆ ಎಂದರು.
“ಕರ್ನಾಟಕದ ಮತದಾರರು ಪ್ರಜ್ಞಾವಂತರು, ಅವರು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಬಗ್ಗೆ ಆಶಾವಾದ ಹೊಂದಿದ್ದಾರೆ. ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತಸ ತಂದಿದ್ದು, ರಾಜ್ಯದ ಹಲವೆಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿರುವ ಬಗ್ಗೆ ವರದಿಯಾಗಿದೆ.